ಏ. 17 ರಂದು ಕಾರವಾರದಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆ

 ಏ. 17 ರಂದು ಕಾರವಾರದಲ್ಲಿ ವಿದ್ಯುತ್  ಗ್ರಾಹಕರ ಸಂವಾದ ಸಭೆ
Share this post

ಕಾರವಾರ ಏಪ್ರಿಲ್ 16, 2021: ನಗರದ ಹೆಸ್ಕಾಂನ ಕಾರ್ಯ ಮತ್ತು ಪಾಲನಾ ಉಪವಿಭಾಗ ಕಛೇರಿಯಲ್ಲಿ ಗ್ರಾಹಕರ ವಿದ್ಯುತ್ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಏ. 17ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1 ರವರೆಗೆ ವಿದ್ಯುತ್ ಅದಾಲತ್ ಹಾಗೂ ಮಧ್ಯಾಹ್ನ 3.30 ರಿಂದ ಸಂಜೆ 5.30 ರವರೆಗೆ ಗ್ರಾಹಕರ ಸಂವಾದ ಸಭೆ ಆಯೋಜಿಸಲಾಗಿದೆ.

ಗ್ರಾಹಕರು ವಿದ್ಯುತ್ ಸಂಬಂಧಿತ ಸಮಸ್ಯೆಗಳೆನಾದರೂ ಇದ್ದಲ್ಲಿ ಸಭೆಯಲ್ಲಿ ಹಾಜರಿದ್ದು, ತಮ್ಮ ಬೇಡಿಕೆಯ ಅಹವಾಲನ್ನು ನೀಡಬಹುದು ಎಂದು ಕಾರವಾರದ ಹೆಸ್ಕಾಂನ ಕಾರ್ಯ ಮತ್ತು ಪಾಲನಾ ಉಪವಿಭಾಗದ ಸಹಾಯಕ ಕಾರ್ಯನಿರ್ವಾಕ ಇಂಜಿನೀಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!