ವಾಣಿಜ್ಯ ಪರೀಕ್ಷೆ: ನಿಷೇಧಾಜ್ಞೆ ಜಾರಿ
ಉಡುಪಿ, ಏಪ್ರಿಲ್ 16, 2021: ಸಾರ್ವಜನಿಕ ಶಿಕ್ಷಣ ಇಲಾಖೆಯ, ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಡೆಯುವ ವಾಣಿಜ್ಯ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಫೋಷಿಸಿ, ಸೆಕ್ಷನ್ 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.
ಏಪ್ರಿಲ್ 19 ರಿಂದ ಮೇ 6 ರ ವರೆಗೆ ಉಡುಪಿಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ನಡೆಯಲಿದ್ದು, ಪರೀಕ್ಷೆಗಳು ಮುಕ್ತಾಯವಾಗುವವರೆಗೆ ಸಂಬಂಧಿಸಿದ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಮತ್ತು ಎಲ್ಲಾ ರೀತಿಯ
ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ, ಈ ಆದೇಶವನ್ನು ಹೊರಡಿಸಲಾಗಿದೆ.
ಈ ಆದೇಶವು ಪರೀಕ್ಷೆ ನಡೆಯುವ ದಿನಗಳಂದು ನಿಗದಿಪಡಿಸಿದ ಪರೀಕ್ಷಾ ಕೇಂದ್ರದ ಸುತ್ತಲೂ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.