ವಯೋಶ್ರೇಷ್ಠ ರಾಷ್ಟ್ರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

 ವಯೋಶ್ರೇಷ್ಠ ರಾಷ್ಟ್ರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
Share this post

ಕಾರವಾರ, ಏಪ್ರಿಲ್ 19, 2021: ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಂದ/ಸಂಸ್ಥೆಗಳಿಂದ 2021-22ನೇ ಸಾಲಿನ ಕೇಂದ್ರ ಸರ್ಕಾರದ ‘ವಯೋಶ್ರೇಷ್ಠ ಸಮ್ಮಾನ್-2021’ ರಾಷ್ಟ್ರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಹಿರಿಯ ನಾಗರಿಕರು ಹಾಗೂ ಅರ್ಹ ಸಂಸ್ಥೆಗಳು ಏ. 26 ರೋಳಗಾಗಿ ಅರ್ಜಿ ನಮೂನೆಗಳನ್ನು ದ್ವಿಪ್ರತಿಯಲ್ಲಿ ಹಾಗೂ ಆಂಗ್ಲ ಭಾಷೆಯಲ್ಲಿ ಭರ್ತಿ ಮಾಡಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉತ್ತರ ಕನ್ನಡ ಜಿಲ್ಲೆ, ಕಾರವಾರ ಈ ವಿಳಾಸಕ್ಕೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08382-221914ಕ್ಕೆ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!