ಬೇಸಿಗೆ ರಜೆ ಮತ್ತು ಮುಂದಿನ ಶೈಕ್ಷಣಿಕ ವರ್ಷಾರಂಭ: ದಿನಾಂಕ ನಿಗದಿಪಡಿಸಿದ ಸರ್ಕಾರ

 ಬೇಸಿಗೆ ರಜೆ ಮತ್ತು ಮುಂದಿನ ಶೈಕ್ಷಣಿಕ ವರ್ಷಾರಂಭ: ದಿನಾಂಕ ನಿಗದಿಪಡಿಸಿದ ಸರ್ಕಾರ
Share this post

ಬೆಂಗಳೂರು, ಏಪ್ರಿಲ್ 20, 2021: ಪ್ರಾಥಮಿಕ ಶಾಲೆಗಳಿಗೆ ಮೇ 1ರಿಂದ ಜೂನ್ 14ರವರಗೆ ಬೇಸಿಗೆ ರಜೆ. ಜೂ. 15ರಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭ.

ಪ್ರೌಢಶಾಲೆಗಳಿಗೆ ಅಂದರೆ 8 ಮತ್ತು 9ನೇ ತರಗತಿಗಳಲ್ಲಿನ ವಿದ್ಯಾರ್ಥಿಗಳಿಗೆ ಮೇ 1ರಿಂದ ಜುಲೈ 14ರವರೆಗೆ ಬೇಸಿಗೆ ರಜೆ. ಪ್ರೌಢಶಾಲೆಗಳ ಶಿಕ್ಷಕರಿಗೆ ಜೂ. 15ರಿಂದ ಜುಲೈ 14ರವರೆಗೆ ಬೇಸಿಗೆ ರಜೆ.

ಜೂ. 21ರಿಂದ ಜು. 5ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯುತ್ತವೆ. ಜು. 15ರಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದೆ.

ಈ ವೇಳಾಪಟ್ಟಿ ತಾತ್ಕಾಲಿಕವಾಗಿದ್ದು, ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರ, ಇಲಾಖೆ ಮತ್ತು ಜಿಲ್ಲಾಡಳಿತಗಳು ನೀಡುವ ಸೂಚನೆ ಮತ್ತು ನಿರ್ದೇಶನಗಳನ್ನು ಪಾಲಿಸುವುದು ಕಡ್ಡಾಯವಾಗಿದೆ.

Subscribe to our newsletter!

Other related posts

error: Content is protected !!