ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ: ಅರ್ಜಿ ಆಹ್ವಾನ
ಉಡುಪಿ, ಎಪ್ರಿಲ್ 21, 2021: ಮೀನುಗಾರಿಕಾ ಕ್ಷೇತ್ರದ ಸುಸ್ಥಿರ ಮತ್ತು ಜವಾಬ್ದಾರಿಯುತ ಬೆಳವಣಿಗೆಗಾಗಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯನ್ನು ರೂಪಿಸಿದೆ.
ಈ ಯೋಜನೆಯಡಿ ವಿವಿಧ ಕಾರ್ಯಕ್ರಮಗಳಾದ ಮೀನು ಕೃಷಿ ಕೊಳಗಳ ನಿರ್ಮಾಣ, ಬೈಯೋಫ್ಲಾಕ್ ಮತ್ತು ಆರ್.ಎ.ಎಸ್ ಘಟಕ ನಿರ್ಮಾಣ, ಮೀನು ಮರಿ ಪಾಲನೆಗೆ ಉತ್ತೇಜನ, ಅಲಂಕಾರಿಕ ಮೀನು ಉತ್ಪಾದನೆ, ಶೈತೀಕರಿಸಿದ ಶಾಖ ನಿರೋಧಕ ವಾಹನ ಖರೀದಿ, ಶೈತ್ಯಾಗಾರ, ಮಂಜುಗಡ್ಡೆ ಸ್ಥಾವರ ನಿರ್ಮಾಣ ಮತ್ತು ನವೀಕರಣ, ಆಳ ಸಮುದ್ರ ಬೋಟ್ ನಿರ್ಮಾಣ, ಹಿನ್ನೀರು ಕೃಷಿ, ಪಂಜರ ಕೃಷಿ, ಮೀನಿನ ಆಹಾರ ಉತ್ಪಾದನಾ ಘಟಕ, ಮೀನು ಮಾರುಕಟ್ಟೆ ಮಳಿಗೆ ನಿರ್ಮಾಣ, ಮೀನುಗಾರಿಕೆ ಬೋಟುಗಳ ಉನ್ನತೀಕರಣ, ಬೋಟಿನಲ್ಲಿ ಬಯೋ ಟಾಯ್ಲೆಟ್ ನಿರ್ಮಾಣ, ಬೋಟಿನಲ್ಲಿಯ ಸಂಪರ್ಕ ಸಾಧನ ಅಳವಡಿಕೆ, ನಾಡ ದೋಣಿಗಳಿಗೆ ಸೇಫ್ಟಿ ಕಿಟ್ ಖರೀದಿ, ಆಹಾರ ಸುರಕ್ಷತಾ ಯೋಜನೆ ಹಾಗೂ ಇನ್ನಿತರ ಯೋಜನೆಗಳಡಿ ರೈತರು, ಮೀನುಗಾರರು ಮತ್ತು ಸಾರ್ವಜನಿಕರಿಂದ ಅರ್ಜಿ ಅಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮೇ 15 ಕೊನೆಯ ದಿನ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ತಾಲೂಕು ಮೀನುಗಾರಿಕಾ ಅಧಿಕಾರಿ ಅಥವಾ ಮೀನುಗಾರಿಕೆ ಉಪನಿರ್ದೇಶಕರು, ಬನ್ನಂಜೆ, ಉಡುಪಿ ದೂರವಾಣಿ ಸಂಖ್ಯೆ: 0820-2530444 ಅನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.