ಅರ್ಜಿ ಆಹ್ವಾನ
ಮಂಗಳೂರು, ಎಪ್ರಿಲ್ 22, 2021: ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, ಪ್ರಸ್ತುತ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶೀಷ್ಯವೇತನ ಸೌಲಭ್ಯಕ್ಕಾಗಿ ಆನ್‍ಲೈನ್ www.ssp.postmatric.karnataka.gov.in ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಎಪ್ರಿಲ್ 30 ಕೊನೆಯ ದಿನ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ದೂರವಾಣಿ ಸಂಖ್ಯೆ : 080-35254757,ಮೊ.ಸಂ: 8050770005 / 8050770004, www.bcwd.karnataka.gov.in/ ಹಾಗೂ ಇ-ಮೇಲ್ ವಿಳಾಸ: [email protected] ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.