ಪಾಲಿಕೆ ಅಧೀನದಲ್ಲಿರುವ ಸ್ಮಶಾನಗಳಲ್ಲಿ ಕೋವಿಡ್-19 ನಿಂದಾಗಿ ಮೃತಪಟ್ಟ ಶವಗಳ ಅಂತ್ಯಕ್ರಿಯೆ ಸಂಪೂರ್ಣ ಉಚಿತ

 ಪಾಲಿಕೆ ಅಧೀನದಲ್ಲಿರುವ ಸ್ಮಶಾನಗಳಲ್ಲಿ ಕೋವಿಡ್-19 ನಿಂದಾಗಿ ಮೃತಪಟ್ಟ ಶವಗಳ ಅಂತ್ಯಕ್ರಿಯೆ ಸಂಪೂರ್ಣ ಉಚಿತ
Share this post

ಮಂಗಳೂರು, ಎಪ್ರಿಲ್ 22, 2021: ಪಾಲಿಕೆ ವ್ಯಾಪ್ತಿಯೊಳಗೆ ಕೋವಿಡ್-19 ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಪರಿಣಾಮಕಾರಿ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ.

ಪ್ರಸ್ತುತ ಕೋವಿಡ್‍ನಿಂದಾಗಿ ಸಾರ್ವಜನಿಕರು ಬಹಳಷ್ಟು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಸಾರ್ವಜನಿಕರ ಸಮಸ್ಯೆಗಳನ್ನು ಯಶಸ್ವಿಯಾಗಿ ನಿಭಾಯಿಸಲು ಆರ್ಥಿಕವಾಗಿ ಸಹಕರಿಸಿ ಅವರ ತೊಂದರೆಗೆ ಸ್ಪಂದಿಸುವುದು ಅವಶ್ಯಕವಾಗಿದೆ. ಆದುದರಿಂದ ಪಾಲಿಕೆಯು ಕೋವಿಡ್‍ನಿಂದ ಮೃತಪಟ್ಟ ಶವಗಳ ಅಂತ್ಯಕ್ರಿಯೆಗಾಗಿ ಕೆಲವು ನಿರ್ಣಯವನ್ನು ಕೈಗೊಳ್ಳಲಾಗಿದೆ.

ಸಾರ್ವಜನಿಕರು ಯಾವುದೇ ರೀತಿಯ ಶುಲ್ಕವನ್ನು ಪಾವತಿಸಬಾರದೆಂದು ತಿಳಿಸಲಾಗಿದೆ. ಇತರ ಕಾರಣಗಳಿಂದ ಮೃತಪಟ್ಟ ಶವಗಳ ಅಂತ್ಯಕ್ರಿಯೆಗೆ ಗರಿಷ್ಟ ರೂ. 5,500 ಶುಲ್ಕವನ್ನು ನಿಗಧಿಪಡಿಸಲಾಗಿದೆ.

ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಪಾಲಿಕೆ ಅಧೀನದಲ್ಲಿರುವ ಎಲ್ಲಾ ಸ್ಮಶಾನಗಳಲ್ಲಿ ಕೋವಿಡ್-19 ನಿಂದಾಗಿ ಮೃತಪಟ್ಟ ಶವಗಳ ಅಂತ್ಯಕ್ರಿಯೆಯ ವೆಚ್ಚವನ್ನು ಪಾಲಿಕೆಯಿಂದ ಭರಿಸುವ ಮೂಲಕ ಸಂಪೂರ್ಣ ಉಚಿತವಾಗಿ ನೆರವೇರಿಸಲಾಗುವುದು.

ಆದ್ದರಿಂದ ಸಾರ್ವಜನಿಕರು ಯಾವುದೇ ರೀತಿಯ ಶುಲ್ಕವನ್ನು ಪಾವತಿಸಬಾರದೆಂದು ತಿಳಿಸಲಾಗಿದೆ. ಇತರ ಕಾರಣಗಳಿಂದ ಮೃತಪಟ್ಟ ಶವಗಳ ಅಂತ್ಯಕ್ರಿಯೆಗೆ ಗರಿಷ್ಟ ರೂ. 5500/- ಶುಲ್ಕವನ್ನು ನಿಗಧಿಪಡಿಸಲಾಗಿದೆ.

ಅಂತ್ಯಕ್ರಿಯೆಗೆ ಸ್ಮಶಾನಗಳಲ್ಲಿ ಸಾರ್ವಜನಿಕರಿಂದ ಹೆಚ್ಚುವರಿ ಶುಲ್ಕ ಪಡೆಯುವುದಾಗಲೀ ಅಥವಾ ಯಾವುದೇ ಸಮಸ್ಯೆಗಳು ಉಂಟಾದಲ್ಲಿ ಪಾಲಿಕೆಯ ಆರೋಗ್ಯಾಧಿಕಾರಿ ಡಾ|| ಮಂಜಯ್ಯ ಶೆಟ್ಟಿ ಮೊಬೈಲ್ ಸಂಖ್ಯೆ: 9448951675 ಅಥವಾ  ಕಂಟ್ರೋಲ್ ರೂಮ್ 0824-2220306 ನ್ನು ಸಂಪರ್ಕಿಸಬಹುದು ಎಂದು ಪಾಲಿಕೆ  ಆಯುಕ್ತ ಅಕ್ಷಯ್ ಶ್ರೀಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.          

Subscribe to our newsletter!

Other related posts

error: Content is protected !!