ಮೃತ ಫಲಾನುಭವಿಗಳ ಹೆಸರನ್ನು ಪಡಿತರ ಚೀಟಿಯಿಂದ ತೆಗೆಸಲು ಸೂಚನೆ
ಕಾರವಾರ, ಏಪ್ರಿಲ್ 22, 2021: ಪಡಿತರ ಚೀಟಿಯಲ್ಲಿ ಸೇರ್ಪಡೆಯಾಗಿರುವ ಯಾವುದೇ ವ್ಯಕ್ತಿ ಮೃತರಾಗಿದ್ದರೆ ಅಂತಹ ವ್ಯಕ್ತಿಗಳ ಹೆಸರನ್ನು ಕುಟುಂಬದ ಮುಖ್ಯಸ್ಥರು ಪಡಿತರ ಚೀಟಿಯಿಂದ ತಕ್ಷಣ ತೆಗೆಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ ನೀಡಿದ್ದಾರೆ.
ಆಹಾರ ನಾಗರಿಕ ಸರಬರಾಜು ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಈ ಕುರಿತು ಈಗಾಗಲೇ ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದಾರೆ. ಹೀಗಾಗಿ ಯಾವುದೇ ವ್ಯಕ್ತಿ ಮೃತರಾಗಿದ್ದರೆ ಅಂತಹವರ ಹೆಸರುಗಳನ್ನು ಕುಟುಂಬದ ಮುಖ್ಯಸ್ಥರು ಜವಾಬ್ದಾರಿಯಿಂದ ಮರಣ ಪ್ರಮಾಣ ಪತ್ರ ನೀಡಿ ಪಡಿತರ ಚೀಟಿಗಳಿಂದ ತಕ್ಷಣ ತೆಗೆದು ಹಾಕಲು ಕ್ರಮ ಕೈಗೊಳ್ಳಬೇಕು. ಒಂದುವೇಳೆ ಮೃತ ಫಲಾನುಭವಿಗಳ ಹೆಸರನ್ನು ಪಡಿತರ ಚೀಟಿಯಿಂದ ತೆಗೆದು ಹಾಲಕದಿದ್ದಲ್ಲಿ ಅವರ ಹೆಸರಿನಲ್ಲಿ ಪಡೆಯುತ್ತಿರುವ ವಸ್ತುಗಳ ಮೌಲ್ಯ ವಸೂಲಿ ಮಾಡಲಾಗುತ್ತದೆ. ಜೊತೆಗೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.