ವಿಕಲಚೇತನರ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ: ಅರ್ಜಿ ಆಹ್ವಾನ

 ವಿಕಲಚೇತನರ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ: ಅರ್ಜಿ ಆಹ್ವಾನ
Share this post

ಮಂಗಳೂರು, ಎಪ್ರಿಲ್ 23, 2021: ವಿಟ್ಲ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಕಡೇಶಿವಾಲಯ ಗ್ರಾಮ ಪಂಚಾಯತ್, ಬರಿಮಾರು ಗ್ರಾಮ ಪಂಚಾಯತ್, ಹಾಗೂ ಪುಣಚ ಗ್ರಾಮ ಪಂಚಾಯತ್‍ನಲ್ಲಿ ಖಾಲಿ ಇರುವ ವಿಕಲಚೇತನರ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಸ್ಥಳೀಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರುವ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮೇ 15 ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾ ಕಚೇರಿ ದೂರವಾಣಿ ಸಂಖ್ಯೆ: 08255-238080 ಹಾಗೂ ಇ-ಮೇಲ್ ವಿಳಾಸ [email protected] ನ್ನು ಸಂಪರ್ಕಿಸಬಹದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ,

Subscribe to our newsletter!

Other related posts

error: Content is protected !!