ಗಾರ್ಮೆಂಟ್ ಗಳಲ್ಲಿ ಶೇ. 50 ರಷ್ಟು ಸಿಬ್ಬಂದಿಗೆ ಅವಕಾಶ: ಜಿ. ಜಗದೀಶ್

 ಗಾರ್ಮೆಂಟ್ ಗಳಲ್ಲಿ ಶೇ. 50 ರಷ್ಟು ಸಿಬ್ಬಂದಿಗೆ ಅವಕಾಶ: ಜಿ. ಜಗದೀಶ್
Share this post

ಉಡುಪಿ, ಎಪ್ರಿಲ್ 29, 2021: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಏಪ್ರಿಲ್ 27 ರ ರಾತ್ರಿ 9 ರಿಂದ ಮೇ 12 ರ ಬೆಳಗ್ಗೆ 6 ಗಂಟೆಯವರೆಗೆ ದಂಡ ಪ್ರಕ್ರಿಯೆ ಸಂಹಿತೆ ಕಲಂ 144 ರಡಿಯಲ್ಲಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆಯನ್ನು ವಿಧಿಸಲಾಗಿದೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಅತಿ ಅವಶ್ಯವೆಂದು ಕಂಡುಬಂದ ಹಿನ್ನೆಲೆ ಕೈಗಾರಿಕೆಗಳು ಮತ್ತು ಕೈಗಾರಿಕ ಸಂಸ್ಥೆಗಳು (ಖಾಸಗಿ ಮತ್ತು ಸರ್ಕಾರಿ) ಕಂಟೈನ್‌ಮೆಂಟ್ ವಲಯದ ಹೊರಗಿನ ಪ್ರದೇಶಗಳಲ್ಲಿ ಅಂದರೆ ಎಲ್ಲಾ ಕೈಗಾರಿಕಾ ಸಂಸ್ಥೆಗಳು, ಉತ್ಪಾದನಾ ಘಟಕಗಳಲ್ಲಿ ಕೋವಿಡ್ ಸಮುಚಿತ ವರ್ತನೆಯನ್ನು ಪಾಲಿಸಿಕೊಂಡು ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.

ಉಡುಪುಗಳ ಉತ್ಪಾದನಾ ಘಟಕಗಳ ಶೇ. 50 ರಷ್ಟು ಉದ್ಯೋಗಿಗಳು ಕೋವಿಡ್ ನಿಯಮವನ್ನು ಪಾಲಿಸಿಕೊಂಡು ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.

ಕಾರ್ಮಿಕರು  ಕೈಗಾರಿಕಾ ಸ್ಥಾಪನೆಯಿಂದ ಸಂಬಂಧಪಟ್ಟವರು ನೀಡಿರುವ ಗುರುತಿನ ಚೀಟಿಯನ್ನು ತೋರಿಸಿ ಸಿಬ್ಬಂದಿಗಳ ಚಲನೆಯನ್ನು ಅನುಮತಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶಿಸಿದ್ದಾರೆ.

ಮೇಲಿನ ಅದೇಶಗಳನ್ನು ಪಾಲಿಸದೇ ಇದ್ದವರ ವಿರುದ್ಧ ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ವಿಪತ್ತು ನಿರ್ವಹಣಾ ಕಾಯ್ದೆ 2005 ಮತ್ತು ಐಪಿಸಿ ಸೆಕ್ಷನ್ 188 ಪ್ರಕಾರ ನಿಯಮಾನುಸಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

error: Content is protected !!