ವಿವಿಧ ಸೌಲಭ್ಯಗಳ ಅರ್ಜಿ ಅವಧಿ ವಿಸ್ತರಣೆ

 ವಿವಿಧ ಸೌಲಭ್ಯಗಳ ಅರ್ಜಿ ಅವಧಿ ವಿಸ್ತರಣೆ
Share this post


ಕಾರವಾರ ಏಪ್ರಿಲ್ 30, 2021: ಜನತಾ ಕರ್ಫ್ಯೂ ಘೋಷಣೆಯಾಗಿರುವ ಪ್ರಯುಕ್ತ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ ಯೋಜನೆ, ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‍ಲೈನ್ ಅರ್ಜಿ ಸಲ್ಲಿಸುವ ಅವಧಿಯನ್ನು ಮೇ 15 ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ವೀರೇಂದ್ರ ಎನ್. ಬಾಡಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ www.ssp.postmatric.karnataka.gov.in
  • ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ಭೇಟಿ ನೀಡಬೇಕಾದ ವೆಬ್‍ಸೈಟ್ ವಿಳಾಸ: www.bcwd.karnataka.gov.in
  • ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 8050770005, 8050770004 ಹಾಗೂ ಇ-ಮೇಲ್: [email protected]
  • ವಿದ್ಯಾರ್ಥಿವೇತನ ತಂತ್ರಾಂಶದ ಇ-ಮೇಲ್: [email protected]

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08382-226589 ಸಂಪರ್ಕಿಸಬಹುದಾಗಿದೆ ಎಂದು ಅವರು ಹೇಳಿದ್ದಾರೆ.

Subscribe to our newsletter!

Other related posts

error: Content is protected !!