ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ
ಬೆಂಗಳೂರು, ಮೇ 04, 2021: ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಸಚಿವ ಸುರೇಶ ಕುಮಾರ್ ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಮಾತನಾಡಿದ ಅವರು, ಪರೀಕ್ಷಾ ದಿನಾಂಕಗಳನ್ನು ಪರೀಕ್ಷೆಗಳು ಆರಂಭವಾಗುವುದಕ್ಕೆ 15-20 ದಿನಗಳ ಮುನ್ನವೇ ಪ್ರಕಟಿಸಲಾಗುವುದು ಎಂದರು.
Also read: Karnataka postpones II PU exams
ಈಗಾಗಲೇ ಪರೀಕ್ಷೆಗೆ ಸಜ್ಜಾಗಿದ್ದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವುದರಿಂದ ಯಾವುದೇ ಕಾರಣಕ್ಕೂ ವಿಚಲಿತರಾಗದೇ ಶ್ರದ್ಧೆಯಿಂದ ತಮ್ಮ ವಿದ್ಯಾಭ್ಯಾಸವನ್ನು ಎಂದಿನಂತೆ ಮುಂದುವರೆಸಬೇಕೆಂದು ಅವರು ಮನವಿ ಮಾಡಿದ್ದಾರೆ.
ಇದೇ ವೇಳೆ ಮೊದಲ ಪಿಯುಸಿ ಎಲ್ಲಾ ಮಕ್ಕಳನ್ನು ದ್ವಿತೀಯ ಪಿಯುಸಿ ಗೆ ತೇರ್ಗಡೆ ಮಾಡಬೇಕು ಎಂದು ಸರಕಾರ ತೀರ್ಮಾನಿಸಿದೆ.