ಉಡುಪಿ: ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಗೆ ಅವಕಾಶ

 ಉಡುಪಿ: ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಗೆ ಅವಕಾಶ
Share this post

ಉಡುಪಿ, ಮೇ 10, 2021: ರಾಜ್ಯಾದ್ಯಂತ ಕೋವಿಡ್-19 ಸೊಂಕು ಪ್ರಕರಣಗಳು ಉಲ್ಬಣಗೊಳ್ಳುತ್ತಿರುವ ಹಿನ್ನಲೆಯಲ್ಲಿ ಸೊಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರಸ್ತುತ ಪರಿಸ್ಥಿತಿಯನ್ನು ಪರಾಮರ್ಶಿಸಿ ಮೇ 10 ರಿಂದ 24 ರ ವರೆಗೆ ಕೊರೋನಾ ಕರ್ಫ್ಯೂ ವಿಧಿಸಿಲಾಗಿರುತ್ತದೆ.

ಸರ್ಕಾರದ ಮುಖ್ಯಕಾರ್ಯದರ್ಶಿಯವರ ಮಾರ್ಗಸೂಚಿಯಂತೆ ಅಗತ್ಯ ವಸ್ತುಗಳ ಪೂರೈಕೆಗೆ ಅವಕಾಶ ಕಲ್ಪಿಸಲಾಗಿದ್ದು, ಸಾರ್ವಜನಿಕ ಪಡಿತರ ವ್ಯವಸ್ಥೆ ಮಾಡಲು ನ್ಯಾಯಬೆಲೆ ಅಂಗಡಿಗಳಿಗೆ ಕಾರ್ಯ ನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ. ಆದ್ದರಿಂದ ತಮ್ಮ ವ್ಯಾಪ್ತಿಗೆ ಒಳಪಡುವ ನ್ಯಾಯಬೆಲೆ ಅಂಗಡಿಗಳು ಈ ಕೆಳಕಂಡ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಅನುಸರಿಸಿ ಪಡಿತರ ವಿತರಣೆ ವ್ಯವಸ್ಥೆ ಕಲ್ಪಿಸಲು ಸೂಚಿಸಲಾಗಿದೆ.

ಪಡಿತರ ವ್ಯವಸ್ಥೆಗೆ ಪ್ರತಿ ತಿಂಗಳು ನಿರ್ವಹಿಸಿದ ವೇಳಾಪಟ್ಟಿಯಂತೆ ಕಾರ್ಯನಿರ್ವಹಿಸಬೇಕು.  ನ್ಯಾಯಬೆಲೆ ಅಂಗಡಿಗಳಿಗೆ ಪಡಿತರದಾರರು ಒಮ್ಮೆಲೇ ಬರದೆ ಸಾಮಾಜಿಕ ಅಂತರ ಕಾಪಾಡುವ ದೃಷ್ಟಿಯಿಂದ ಅವಶ್ಯಕತೆಗೆ ತಕ್ಕಂತೆ ವಾರ್ಡ್ ವಾರು ಪಡಿತರದಾರರಿಗೆ ಮೊದಲೇ ತಿಳಿಸಿ ಪಡಿತರ ವ್ಯವಸ್ಥೆಯನ್ನು ಈ ವಾರದಿಂದಲೇ ಪ್ರಾರಂಭಿಸಬೇಕು. ತಿಂಗಳ ಕೊನೆಯ ವಾರದಲ್ಲಿ ವಿತರಿಸಿದಲ್ಲಿ ಸಮಸ್ಯೆ ಎದುರಾಗಬಹುದಾಗಿದ್ದು ಅದಕ್ಕೆ ಅವಕಾಶ ನೀಡದಿರುವುವಂತೆ ತಿಳಿಸಲಾಗಿದೆ.

ನ್ಯಾಯಬೆಲೆ ಅಂಗಡಿಯ ಮುಂಭಾಗದಲ್ಲಿ ಸಾಮಾಜಿಕ ಅಂತರ ಕಾಪಾಡಲು ಆರು ಅಡಿಗೊಂದು ಚೌಕವನ್ನು ಕಡ್ಡಾಯವಾಗಿ ಮಾಡಿ ಅದರಂತೆ ಪಡಿತರದಾರರನ್ನು ಸಾಲಿನಲ್ಲಿ ನಿಲ್ಲಿಸಿ ಪಡಿತರ ವ್ಯವಸ್ಥೆ ಕಲ್ಪಿಸಬೇಕು.

ಕೋವಿಡ್-19 ರ ಮಾರ್ಗಸೂಚಿಯಂತೆ ಪ್ರತಿ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿದಾರರಿಗೆ ಸಾರ್ವಜನಿಕ ಅಂತರ ಕಾಪಾಡುವುದು, ಮಾಸ್ಕನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಸ್ಯಾನಿಟೈಸರ್ ಬಳಸುವ ವ್ಯವಸ್ಥೆ ಕಲ್ಪಿಸಬೇಕು.

Subscribe to our newsletter!

Other related posts

error: Content is protected !!