ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಎಚ್ಚರಿಕೆ

 ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಎಚ್ಚರಿಕೆ
Share this post
cyclone

ಉಡುಪಿ, ಮೇ 12, 2021: ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳ ಕಾಲ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿರುತ್ತದೆ.

ಜಿಲ್ಲೆಯಲ್ಲಿ ಹವಾಮಾನ ಇಲಾಖೆಯ ವರದಿಯಂತೆ ಮೇ 14 ರಿಂದ 16 ರ ಮೂರು ದಿನಗಳ ಅವಧಿಯಲ್ಲಿಅರಬ್ಬಿ ಸಮುದ್ರದಲ್ಲಿಉಂಟಾದ ವಾಯುಭಾರ ಕುಸಿತದಿಂದಾಗಿ ಹೆಚ್ಚಿನ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗೃತಾ ಕ್ರಮ ವಹಿಸಬೇಕಾಗಿರುವುದರಿಂದ ಸಾರ್ವಜನಿಕರಿಗೆ ಈ ಕೆಳಕಂಡ ಸೂಚನೆಗಳನ್ನು ನೀಡಲಾಗಿರುತ್ತದೆ.

ಜಿಲ್ಲಾ/ ತಾಲೂಕು ಮಟ್ಟದ ಅಧಿಕಾರಿಗಳು, ನಿಯೋಜನೆಗೊಂಡ ನೋಡೆಲ್ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಕೋಪವನ್ನು ನಿಭಾಯಿಸಲು ತಯಾರಿ ಮಾಡಿಕೊಳ್ಳಬೇಕು.

ಮೀನುಗಾರರು ನದಿ, ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು.ಮಕ್ಕಳು, ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳ ಹತ್ತಿರ/ ಕೆಳಗೆ ನಿಲ್ಲದೇ ಸುರಕ್ಷಿತ ಸ್ಥಳಗಳನ್ನು ತಲುಪಬೇಕು.

ತುರ್ತು ಸೇವೆಗಾಗಿ 1077 ಅಥವಾ ದೂರವಾಣಿ ಸಂಖ್ಯೆ: 0820-2574802 ಅನ್ನು ಸಂಪರ್ಕಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!