ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ಆಶೀರ್ವಾದ ಪಡೆದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು

 ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ಆಶೀರ್ವಾದ ಪಡೆದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು
Share this post

ಉಡುಪಿ, ಮೇ 14, 2021: ಶ್ರೀ ಶೀರೂರು ಮಠದ ನೂತನ ಉತ್ತರಾಧಿಕಾರಿಯಾಗಿ ಇಂದು ನೇಮಕಗೊಂಡ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣ ಮುಖ್ಯಪ್ರಾಣರ ಆಶೀರ್ವಾದ ಪಡೆದರು.

ಸೋದೆ ವಾದಿರಾಜ ಮಠಾಧೀಶರಾದ ಶ್ರೀವಿಶ್ವವಲ್ಲಭ ತೀರ್ಥರು ಹಾಗೂ ಶ್ರೀ ವೇದವರ್ಧನತೀರ್ಥ ಶ್ರೀಪಾದರನ್ನು ರಥಬೀದಿಯಲ್ಲಿ ಮೆರವಣಿಗೆಯಲ್ಲಿ ವಾದ್ಯಘೋಷ, ವೇದಘೋಷದೊಂದಿಗೆ ಶ್ರೀಕೃಷ್ಣ ಮಠಕ್ಕೆ ಪರ್ಯಾಯ ಪೀಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಬರಮಾಡಿಕೊಂಡರು.

ಬಳಿಕ ಚಂದ್ರಶಾಲೆಯಲ್ಲಿ ಮಾಲಿಕೆ ಮಂಗಳಾರತಿ ನಡೆಯಿತು.

ಹೆಚ್ಚಿನ ಚಿತ್ರಗಳಿಗೆ ಮುಂದಿನ ಪುಟ ನೋಡಿ….

Subscribe to our newsletter!

Other related posts

error: Content is protected !!