ನ್ಯಾಯಾಧೀಶರ ಕೊರೋನಾ ಚಿಕಿತ್ಸೆಗೆ ಸ್ಪಂದಿಸಲು ನೋಡೆಲ್ ಅಧಿಕಾರಿಗಳ ನೇಮಕ
ಉಡುಪಿ ಮೇ 16, 2021: ಜಿಲ್ಲೆಯಲ್ಲಿ ನ್ಯಾಯಾಧೀಶರುಗಳಿಗೆ, ಅಧಿಕಾರಿ, ಸಿಬ್ಬಂದಿ ಹಾಗೂ ನ್ಯಾಯವಾದಿಗಳಿಗೆ ಕೋವಿಡ್-19 ಸೋಂಕು ತಗುಲಿದಲ್ಲಿ ಚಿಕಿತ್ಸೆಗೆ ಸ್ಪಂದಿಸುವ ಸಲುವಾಗಿ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಿ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿ ಬಿ. ಸದಾಶಿವ ಪ್ರಭು ಆದೇಶ ಹೊರಡಿಸಿದ್ದಾರೆ.
ಅಧಿಕಾರಿಗಳ ವಿವರ:
ನೋಡೆಲ್ ಅಧಿಕಾರಿ
ಅಪರ ಜಿಲ್ಲಾಧಿಕಾರಿ ಬಿ. ಸದಾಶಿವ ಪ್ರಭು: 9448169434
ಸಹಾಯಕ ನೋಡೆಲ್ ಅಧಿಕಾರಿ:
- ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ: 7899508907
- ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಮೊಹಮ್ಮದ್ ಇಸಾಕ್: 9448780521
- ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿ ಅಬ್ಬಾಸ್ ಎಸ್: 9448216724
ವೈದ್ಯರಾಗಿ
ಜಿಲ್ಲಾ ಕೋವಿಡ್-19 ವಿಶೇಷ ನೋಡೆಲ್ ಅಧಿಕಾರಿ ಡಾ. ಪ್ರೇಮಾನಂದ: 9972500235