ಶಾಸಕರು ಹಾಗೂ ಮೇಯರ್ ಅವರಿಂದ ಕೋವಿಡ್ ಕಿಟ್ ವಿತರಣೆಗೆ ಚಾಲನೆ
ಮಂಗಳೂರು, ಮೇ 17, 2021: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರೋಗ ಲಕ್ಷಣಗಳಿದ್ದು ಮನೆಯಲ್ಲಿಯೇ ಕ್ವಾರಂಟೈನ್ ಆಗಿರುವ ಕೋವಿಡ್ ಸೋಂಕಿತರಿಗೆ ವಿತರಿಸುವ ಕೋವಿಡ್ ಕಿಟ್ ನ್ನು ಶಾಸಕ ವೇದವ್ಯಾಸ್ ಕಾಮತ್ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಹಸ್ತಾಂತರಿಸುವ ಮೂಲಕ ಸಾಂಕೇತಿಕವಾಗಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ನಗರದಲ್ಲಿ ಕೋವಿಡ್ ಸೋಂಕಿತರು ಅಲ್ಪ ಪ್ರಮಾಣದಲ್ಲಿ ರೋಗ ಲಕ್ಷಣಗಳಿದ್ದು ಮನೆಯಲ್ಲಿಯೇ ಕ್ವಾರಂಟೈನ್ ಆಗಿರುವ ಸೋಂಕಿತರಿಗೆ ಪ್ಯಾರಸಿಟಮಲ್, ಆ್ಯಂಟಿ ಬೈಟಿಕ್, ವಿಟಮಿನ್ ಸಿ, ಝಿಂಕ್ ಮಾತ್ರೆಗಳನ್ನು ಒಳಗೊಂಡ ಕೋವಿಡ್ ಕಿಟ್ ಅನ್ನು ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಕಾರ್ಯಕರ್ತರು ತಲುಪಿಸಲಿದ್ದಾರೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.
ಬಳಿಕ ಮಾತನಾಡಿದ ಮೇಯರ್ ಪ್ರೇಮಾನಂದ ಶೆಟ್ಟಿ, ಮಂಗಳೂರು ಮಹಾನಗರ ಪಾಲಿಕೆಯಿಂದ ಈಗಾಗಲೇ ಕೋವಿಡ್ ನಿಯಂತ್ರಣಕ್ಕಾಗಿ ಎಲ್ಲಾ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ಲಸಿಕೆ ವಿತರಿಸುತ್ತಿರುವ ನಗರದ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಪಾಲಿಕೆಯ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಸದ್ಯ ಈ ಕೋವಿಡ್ ಕಿಟ್ ಗಳನ್ನು ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಕಾರ್ಯಕರ್ತೆಯರ ಮೂಲಕ ಕೋವಿಡ್ ಸೋಂಕಿತರಿಗೆ ನೀಡಲಾಗುವುದು ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಕದ್ರಿ ಮನೋಹರ್ ಶೆಟ್ಟಿ, ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.