ಉಡುಪಿ ನಗರ ವ್ಯಾಪ್ತಿಯಲ್ಲಿ ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೀಕರಣ
ಉಡುಪಿ, ಮೇ 19, 2021: ಉಡುಪಿ ನಗರ ಪ್ರದೇಶದಲ್ಲಿ ಮಾರ್ಚ್ 30 ಅಥವಾ ಅದಕ್ಕಿಂತ ಮೊದಲು 1ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದುಕೊಂಡು 2ನೇ ಡೋಸ್ ಲಸಿಕೆ ಪಡೆಯಲು ಬಾಕಿ ಇರುವವರಿಗೆ ಮೇ 20 ರಂದು ಲಸಿಕೆ ನೀಡಲಾಗುತ್ತದೆ.
ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯಲ್ಲಿ (100 ಡೋಸ್), ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲದಲ್ಲಿ (100 ಡೋಸ್), ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿಯಲ್ಲಿ (100 ಡೋಸ್) ಹಾಗೂ ಸರಕಾರಿ (ಬಿ.ಆರ್.ಎಸ್) ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉಡುಪಿಯಲ್ಲಿ (100 ಡೋಸ್) ಮೇ 20 ರಂದು ಅಪರಾಹ್ನ 2 ಗಂಟೆಯಿಂದ 4 ಗಂಟೆಯವರೆಗೆ ಲಸಿಕಾ ಕಾರ್ಯ ಏರ್ಪಡಿಸಲಾಗಿದೆ.
ಸದರಿ 2ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆಯಲು ಬಾಕಿ ಇರುವವರಿಗೆ SMS ಕಳುಹಿಸಲಾಗುವುದು. SMS ಬಂದವರು
ತಿಳಿಸಿರುವ ಆಸ್ಪತ್ರೆಗೆ ಬಂದು ಲಸಿಕೆಯನ್ನು ಪಡೆದುಕೊಳ್ಳಬೇಕು ಎಂದು ಜಿಲ್ಲಾ ಆರೊಗ್ಯ ಮತ್ತು ಕು.ಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಯಾವುದೇ ಕೋವಿಶೀಲ್ಡ್ ಲಸಿಕಾ ಕೇಂದ್ರ ಇರುವುದಿಲ್ಲ ಹಾಗೂ ಉಡುಪಿ ಜಿಲ್ಲೆಯಲ್ಲಿ ಮೇ 20 ರಂದು ಯಾವುದೇ ಕೋವಿಡ್ ಲಸಿಕೆ ಪ್ರಥಮ ಡೋಸ್ ನೀಡಲಾಗುವುದಿಲ್ಲ ಎಂದು ಹೇಳಿದ್ದಾರೆ.