ಮೇ 22 ರಿಂದ ಮೇ 24 ರವರೆಗೆ ಉತ್ತರ ಕನ್ನಡ ಸಂಪೂರ್ಣ ಲಾಕ್ಡೌನ್
ಕಾರವಾರ ,ಮೇ. 20, 2021: ಕೋವಿಡ್ ಪ್ರಕರಣ ನಿರಂತರವಾಗಿ ಅಧಿಕವಾಗುತ್ತಿರುವ ಹಿನ್ನಲೆಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ ಮೇರೆಗೆ ಮೇ 22 ರ ಬೆಳಿಗ್ಗೆ 6 ಗಂಟೆಯಿಂದ ಮೇ 24 ರ ಬೆಳಿಗ್ಗೆ 6 ಗಂಟೆಯವರೆಗೆ ಜಿಲ್ಲೆಯಾದ್ಯಂತ ಸಂಪೂರ್ಣ ಕಠಿಣ ಲಾಕ್ಡೌನ್ ಘೋಷಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ ಎಂ. ಪಿ. ಅವರು ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಕಾರವಾರ: ಕಂಟೈನ್ಮೆಂಟ್ ವಲಯದಲ್ಲಿ ಸಾರ್ವಜನಕರ ಅಗತ್ಯ ಸೇವೆಗಳ ಪೂರೈಕೆಗಾಗಿ ನೋಡಲ್ ಅಧಿಕಾರಿ ಹಾಗೂ ಸ್ವಯಂ ಸೇವಕರ ನೇಮಕ
ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಕೋವಿಡ್ ಕೇಸ್ ಗಳು ಹಾಗೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತವು ಲಾಕ್ ಡೌನ್ ಘೋಷಿಸುವ ಮೂಲಕ ಕಠಿಣ ಕ್ರಮ ಕೈಗೊಂಡಿದೆ.