ಉಡುಪಿ: ಸದ್ಯ ಮದುವೆ ಸಮಾರಂಭಗಳಿಗೆ ಅನುಮತಿ ಇಲ್ಲ
ಉಡುಪಿ ಮೇ 24, 2021: ಜಿಲ್ಲೆಯಲ್ಲಿ ಕೋವಿಡ್-19 ಎರಡನೇ ಅಲೆಯನ್ನು ನಿಯಂತ್ರಿಸುವ ಸಲುವಾಗಿ, ಮೇ 25
ರಿಂದ ಜೂನ್ 7 ರವೆರೆಗೆ ಯಾವುದೇ ಮದುವೆ ಸಮಾರಂಭಗಳಿಗೆ ಅನುಮತಿ ನೀಡಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಈಗಾಗಲೇ ಅನುಮತಿ ಪಡೆದಿರುವ ಮದುವೆಗಳನ್ನು ನಡೆಸಬಹುದಾಗಿದ್ದು, ಹೊಸದಾಗಿ ಅನುಮತಿಗಳನ್ನು ನೀಡುವುದಿಲ್ಲ ಎಂದು
ಜಿಲ್ಲಾಧಿಕಾರಿ ತಿಳಿಸಿದ್ದಾರೆ