ಜೂನ್ 1 ರಿಂದ ಮೀನುಗಾರಿಕೆ ನಿಷೇಧ

 ಜೂನ್ 1 ರಿಂದ ಮೀನುಗಾರಿಕೆ ನಿಷೇಧ
Share this post

ಉಡುಪಿ ಮೇ 24, 2021: ರಾಜ್ಯ ಸರಕಾರದ ಅಧಿಸೂಚನೆಯಂತೆ ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ಉಡುಪಿ ಜಿಲ್ಲೆಯೂ ಸೇರಿದಂತೆ ಕರ್ನಾಟಕ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರ ವರೆಗೆ ಒಟ್ಟು 61 ದಿನಗಳ ನಿಷೇಧವನ್ನು ಹೇರಿ ಆದೇಶವನ್ನು ಹೊರಡಿಸಿರುತ್ತದೆ.

ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ
ಸಾಂಪ್ರದಾಯಕ/ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿರುತ್ತದೆ.

ಕೇಂದ್ರ ಕೃಷಿ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವಾಲಯದ ಆದೇಶದಂತೆ ರಾಜ್ಯವೂ ಸೇರಿದಂತೆ ಪಶ್ಚಿಮ ಕರಾವಳಿಯ
ಎಲ್ಲಾ ರಾಜ್ಯಗಳ ವಿಶೇಷ ಆರ್ಥಿಕ ವಲಯದ (12 ರಿಂದ 200 ನಾಟಿಕಲ್ ಮೈಲಿ) ಜಲಪ್ರದೇಶದಲ್ಲಿ ಜೂನ್ 1 ರಿಂದ ಜುಲೈ 31
ರವರೆಗೆ ಒಟ್ಟು 61 ದಿನಗಳ ಮೀನುಗಾರಿಕೆ ನಿಷೇಧವನ್ನು ಹೇರಿ ಏಕ ರೂಪದ ಮೀನುಗಾರಿಕೆ ನಿಷೇಧನ್ನು ಜಾರಿಗೊಳಿಸಲಾಗಿರುತ್ತದೆ.

ಸರಕಾರದ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು, ಕರ್ನಾಟಕ ಕಡಲ ಮೀನುಗಾರಿಕೆ
ಕಾಯ್ದೆ 1986 ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ, ಒಂದು ವರ್ಷದ ಅವಧಿಗೆ ಡೀಸೆಲ್ ಮೇಲಿನ
ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ.

ಎಲ್ಲಾ ಮೀನುಗಾರರು ಈ ಆದೇಶವನ್ನು ಪಾಲಿಸಿ ಸಹಕರಿಸುವಂತೆ ಮೀನುಗಾರಿಕಾ ಇಲಾಖೆಯ ಹಿರಿಯ ಉಪನಿರ್ದೇಶಕರು
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!