ಉಡುಪಿ: ಕ್ರೀಡಾಪಟುಗಳಿಗೆ ಆದ್ಯತೆಯ ಮೇರೆಗೆ ಕೋವಿಡ್ ಲಸಿಕೆ
ಉಡುಪಿ, ಮೇ 27, 2021: ಜಿಲ್ಲಾಡಳಿತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ರಾಷ್ಟೀಯ, ಅಂತರಾಷ್ಟೀಯ ಹಾಗೂ ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟುಗಳಿಗೆ ಆದ್ಯತೆ ಮೇರೆಗೆ ಕೋವಿಡ್-19 ಲಸಿಕೆ ನೀಡಲು ಕ್ರೀಡಾಪಟುಗಳ ವಿವರಗಳನ್ನು ಸಲ್ಲಿಸಲು ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ದೂ.ಸಂಖ್ಯೆ:0820-2521324, ಮೊ.ನಂ:9480886467 ಅನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.