ಕ್ರೀಡಾ ವಿದ್ಯಾರ್ಥಿವೇತನ: ಅವಧಿ ವಿಸ್ತರಣೆ
ಉಡುಪಿ, ಮೇ 27, 2021: ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ 6 ರಿಂದ 10 ನೇ ತರಗತಿಯ ಕ್ರೀಡಾಪಟುಗಳಿಗೆ ವಾರ್ಷಿಕ ರೂ.10,000 ದಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್ 25 ರ ವರೆಗೆ ವಿಸ್ತರಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ದೂ.ಸಂಖ್ಯೆ:0820-2521324, ಮೊ.ನಂ:9480886467 ಅನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ