ಉಡುಪಿ: ಮೇ 29 ರಂದು ಕೋವಿಡ್ ಲಸಿಕೆ ವಿತರಣೆ

 ಉಡುಪಿ: ಮೇ 29 ರಂದು ಕೋವಿಡ್ ಲಸಿಕೆ ವಿತರಣೆ
Share this post

ಉಡುಪಿ ಮೇ 28, 2021:  ಮೇ 29 ರಂದು ಗ್ರಾಮೀಣ ಪ್ರದೇಶದ ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬೇಕು ಎಂದು ಡಿಹೆಚ್‌ಓ ಡಾ.ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ

ಮೇ 29 ರಂದು ಉಡುಪಿ ನಗರ ಪ್ರದೇಶದಲ್ಲಿ ಕೋವಿಶೀಲ್ಡ್ ಪ್ರಥಮ ಡೋಸ್ ಲಸಿಕೆಯನ್ನು ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳು ಮತ್ತು ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ ಹಳೆ ಕಟ್ಟಡ(ಅಲಂಕಾರ್ ಥಿಯೇಟರ್ ಹತ್ತಿರ) (100 ಡೋಸ್), ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿಯಲ್ಲಿ (250 ಡೋಸ್), ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿಯಲ್ಲಿ (ಸೇಂಟ್ ಸಿಸಿಲಿ ಶಾಲೆ) (150 ಡೋಸ್), ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲದಲ್ಲಿ (ಮಾಧವ ಕೃಪಾ ಶಾಲೆ, ಮಣಿಪಾಲ)(150 ಡೋಸ್) ಮತ್ತು ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (100 ಡೋಸ್) ನೀಡಲಾಗುವುದು.

45 ವರ್ಷ ಮೇಲ್ಪಟ್ಟ ಸಾರ್ವಜನಿಕರು/ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ 2ನೇ ಡೋಸ್ ಲಸಿಕೆಯನ್ನು ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿಯಲ್ಲಿ (ಸೇಂಟ್ ಸಿಸಿಲಿ ಶಾಲೆ) (100 ಡೋಸ್) ಮತ್ತು ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲದಲ್ಲಿ (ಮಾಧವ ಕೃಪಾ ಶಾಲೆ, ಮಣಿಪಾಲ)(150 ಡೋಸ್), ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯಲ್ಲಿ (ಸರಕಾರಿ ಪ್ರಾಥಮಿಕ ಶಾಲೆ ಆದಿ ಉಡುಪಿ ಯಲ್ಲಿ) (200 ಡೋಸ್) ಮತ್ತು ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (100 ಡೋಸ್) ನೀಡಲಾಗುವುದು.

 ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ ದುರ್ಬಲ ಗುಂಪಿನ ಫಲಾನುಭವಿಗಳು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರು/ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಮೇ 29 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು.  ರಾಜ್ಯ ಸರಕಾರ ಗುರುತಿಸಿರುವ 18 ವಿಧದ ಆದ್ಯತಾ ಗುಂಪುಗಳಿಗೆ (ಅನುಬಂಧ-2 ರಲ್ಲಿರುವ) ಲಸಿಕಾಕರಣದ ದಿನಾಂಕವನ್ನು ಮುಂದೆ ತಿಳಿಸಲಾಗುವುದು ಎಂದು ಡಾ.ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಭ್ಯವಿರುವುದಿಲ್ಲ.

Subscribe to our newsletter!

Other related posts

error: Content is protected !!