ಹೂವು, ಹಣ್ಣು , ತರಕಾರಿ ಬೆಳೆಗಾರರಿಗೆ ಪರಿಹಾರ
ಉಡುಪಿ ಮೇ 28, 2021: ಕೋವಿಡ್-19 ರ ಎರಡನೆ ಅಲೆ ಕಾರಣ ರಾಜ್ಯದಲ್ಲಿ ವಿಧಿಸಿರುವ ಜನತಾಕರ್ಪ್ಯೂಅವಧಿಯಲ್ಲಿ ಹೂವು, ಹಣ್ಣು ಹಾಗೂ ತರಕಾರಿ ಬೆಳೆಗಾರರಿಗೆ ಉಂಟಾದ ನಷ್ಟಕ್ಕೆ ಹೆಕ್ಟೇರ್ ರೂ. 10,000 ಪರಿಹಾರವನ್ನು ಗರಿಷ್ಟ 1 ಹೆಕ್ಟೇರ್ ಗೆ ಹಾಗೂ ಕನಿಷ್ಟ ರೂ.2000 ಕ್ಕೆ ಮಿತಿಗೊಳಿಸಿ ವಿತರಿಸಲಾಗುವುದು.
ವಾರ್ಷಿಕ ಹೂವು, ಹಣ್ಣುಮತ್ತುತರಕಾರಿ ಬೆಳೆಗಳಿಗೆ 2021-22 ನೇ ಸಾಲಿನ ಬೇಸಿಗೆ ಬೆಳೆ ಸಮೀಕ್ಷೆ ಹಾಗೂ ಬಹುವಾರ್ಷಿಕ ಬೆಳೆಗಳಿಗೆ 2021-22 ನೇ ಸಾಲಿನ ಮುಂಗಾರು ಬೆಳೆ ಸಮೀಕ್ಷೆ ಮಾಹಿತಿಯ ಆಧಾರದಲ್ಲಿ ಪಾವತಿಸಲು ಸರ್ಕಾರದ ಸೂಚನೆಯಿದ್ದು, ಬೆಳೆ ಸಮೀಕ್ಷೆಯಲ್ಲಿ ನಮೂದಾಗಿರುವ ಹಾಗೂ ಇಲಾಖೆಯ ತಂತ್ರಾಂಶದಲ್ಲಿ ನೊಂದಣಿಯಾಗಿರುವ ಹಾಗೂ ನೊಂದಣಿಯಾಗದೆ ಇರುವ ರೈತರ ವಿವರಗಳು ತೋಟಗಾರಿಕೆ ಇಲಾಖಾ ಕಛೇರಿಗಳಲ್ಲಿ ಲಭ್ಯವಿರುತ್ತದೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ರೈತರು ಈಗಾಗಲೇಇಲಾಖೆಯ FRUITS ತಂತ್ರಾಂಶದಲ್ಲಿ ನೊಂದಣಿಯಾಗಿದ್ದರೆ ಅರ್ಹ ರೈತರಿಗೆ ಪರಿಹಾರವನ್ನು ನೇರವಾಗಿ ಪಾವತಿಸಲಾಗುವುದು. ಈ FRUITS ತಂತ್ರಾಂಶದಲ್ಲಿ ನೋಂದಣಿಯಾಗದೇ ಇರುವ ರೈತರು ತಮ್ಮಆಧಾರ್ ನ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಹಾಗೂ ಮೊಬೈಲ್ ಸಂಖ್ಯೆಯ ವಿವರಗಳನ್ನು ತಾಲೂಕು ತೋಟಗಾರಿಕೆ ಇಲಾಖೆಯ ಕಛೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆಯ ಜಿಲ್ಲಾ ಅಥವಾ ಸಂಬಂಧಿಸಿದ ತಾಲೂಕು ಮಟ್ಟದ ಕಛೇರಿಯನ್ನು ಹಾಗೂ ಜಿಲ್ಲೆಯ ವಿವಿಧತೋಟಗಾರಿಕೆ ಇಲಾಖಾ ಕಚೇರಿಗಳ ದೂರವಾಣಿ ಸಂಖ್ಯೆ ನ್ನು ಸಂಪರ್ಕಿಸಬಹುದು
- ತೋಟಗಾರಿಕೆಉಪನಿರ್ದೇಶಕರು (ಜಿ.ಪಂ.), ಉಡುಪಿ ಜಿಲ್ಲೆ: 0820-2531950
- ಹಿರಿಯ ಸಹಾಯಕತೋಟಗಾರಿಕೆ ನಿರ್ದೇಶಕರು (ಜಿ.ಪಂ.) ಉಡುಪಿ ತಾಲೂಕು: 0820-2522837
- ಹಿರಿಯ ಸಹಾಯಕತೋಟಗಾರಿಕೆ ನಿರ್ದೇಶಕರು (ಜಿ.ಪಂ.)ಕುಂದಾಪುರ ತಾಲೂಕು: 08254-230813
- ಹಿರಿಯ ಸಹಾಯಕತೋಟಗಾರಿಕೆ ನಿರ್ದೇಶಕರು (ಜಿ.ಪಂ.), ಕಾರ್ಕಳ ತಾಲೂಕು: 08258-230288