ಉಡುಪಿ ಜಿಲ್ಲಾಡಳಿತಕ್ಕೆ ಆಕ್ಸಿಜನ್ ಕಾನ್ಸನ್ಟ್ರೇಟರ್ ಹಸ್ತಾಂತರಿಸಿದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್

 ಉಡುಪಿ ಜಿಲ್ಲಾಡಳಿತಕ್ಕೆ ಆಕ್ಸಿಜನ್ ಕಾನ್ಸನ್ಟ್ರೇಟರ್ ಹಸ್ತಾಂತರಿಸಿದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್
Share this post

ಉಡುಪಿ, ಮೇ 29, 2021: ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ರೂ. 1,84,800 ವೆಚ್ಚದ 3 ಆಕ್ಸಿಜನ್ ಕಾನ್ಸನ್ಟ್ರೇಟರ್ ಗಳನ್ನು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ರವರ ಮೂಲಕ ಜಿಲ್ಲಾಡಳಿತಕ್ಕೆ ಶನಿವಾರ ಹಸ್ತಾಂತರಿಸಲಾಯಿತು.

ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಸಮಾಜಮುಖಿ ಕಾರ್ಯಗಳ ಬಗ್ಗೆ ಜಿಲ್ಲಾಧಿಕಾರಿ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷ ಅರ್ಜುನ್ ಭಂಡಾರ್ಕರ್, ಛಾಯಾಗ್ರಾಹಕ ಮಂಜು ನಿರೇಶ್ವಾಲ್ಯ, ರಮೇಶ್ ಶೆಣೈ ಉಪಸ್ಥಿತರಿದ್ದರು.

ಇದನ್ನೂ ಓದಿ: ವೆನ್ಲಾಕ್ ಗೆ 6 ಆಕ್ಸಿಜನ್ ಕಾನ್ಸನ್ಟ್ರೇಟರ್ಸ್ ಹಸ್ತಾಂತರಿಸಿದ ಸೇವ್ ಲೈಫ್  ಟ್ರಸ್ಟ್

“ಈಗಾಗಲೇ ಟ್ರಸ್ಟ್ ವತಿಯಿಂದ 6 ಆಕ್ಸಿಜನ್ ಕಾನ್ಸನ್ಟ್ರೇಟರ್ ಗಳನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ಮೂಲಕ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಗಿದೆ. ಮುಂದಿನ ದಿನಗಳಲ್ಲಿ ಬಂಟ್ವಾಳ ತಾಲೂಕಿಗೂ ಆಕ್ಸಿಜನ್ ಕಾನ್ಸನ್ಟ್ರೇಟರ್ ನೀಡುವ ಯೋಜನೆ ಹಾಕಿಕೊಂಡಿದ್ದೇವೆ. ಕಳೆದ ಹತ್ತು ತಿಂಗಳಲ್ಲಿ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಮೂಲಕ ಸುಮಾರು 1.3 ಕೋಟಿ ರೂಪಾಯಿ ವೆಚ್ಚದಲ್ಲಿ ಅನಾರೋಗ್ಯ ಪೀಡಿತರ ಚಿಕಿತ್ಸೆ, ಉಚಿತವಾಗಿ ಮನೆಗಳನ್ನು ನಿರ್ಮಿಸಲು ಸೇರಿದಂತೆ ವಿವಿಧ ಸಾಮಾಜಿಕ ಕಾರ್ಯಗಳಿಗೆ ನೀಡಲಾಗಿದೆ ಎಂದು ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅರ್ಜುನ್ ಭಂಡಾರ್ಕರ್ ಹೇಳಿದರು.

Subscribe to our newsletter!

Other related posts

error: Content is protected !!
WhatsApp us
Click here to join our WhatsApp Group