ಉಡುಪಿ: ಲಸಿಕಾ ಕೇಂದ್ರಗಳಿಗೆ ನೋಡೆಲ್ ಅಧಿಕಾರಿಗಳ ನೇಮಕ

 ಉಡುಪಿ: ಲಸಿಕಾ ಕೇಂದ್ರಗಳಿಗೆ ನೋಡೆಲ್ ಅಧಿಕಾರಿಗಳ ನೇಮಕ
Share this post

ಉಡುಪಿ ಮೇ 31, 2021: ಜಿಲ್ಲೆಯ ಉಡುಪಿ ತಾಲೂಕಿನ ವ್ಯಾಪ್ತಿಯಲ್ಲಿ ಲಸಿಕಾಕರಣಕ್ಕಾಗಿ ಏರ್ಪಡಿಸಲಾದ ಲಸಿಕಾ ಕೇಂದ್ರಗಳಲ್ಲಿ ಪ್ರತಿದಿನ ಕೊರೋನಾ ಮುಂಚೂಣಿ ಕಾರ್ಯಕರ್ತರು, ಆದ್ಯತಾ ಗುಂಪಿನವರು ಹಾಗೂ 45 ವರ್ಷಕ್ಕಿಂತ ಹೆಚ್ಚಿನ
ವಯೋಮಾನದವರು ಲಸಿಕಾ ಡೋಸ್‌ಗಳನ್ನು ಪಡೆಯುತ್ತಿದ್ದು, ಈ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ
ಇರುವುದು ಹಾಗೂ ಲಸಿಕಾ ಕರಣಕ್ಕೆ ನೋಂದಣಿಯಾಗದೇ ಇರುವ ವ್ಯಕ್ತಿಗಳು ಬಂದು ಗೊಂದಲದ ವಾತಾವರಣ
ಸೃಷ್ಟಿಸುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ.

ಕೇಂದ್ರಗಳಲ್ಲಿ ವ್ಯವಸ್ಥಿತವಾಗಿ ನಿರ್ವಹಣೆ ನಡೆಸಲು, ಸಾರ್ವಜನಿಕ ಲಸಿಕಾ ಕೇಂದ್ರದಲ್ಲಿ ವ್ಯವಸ್ಥಿತವಾಗಿ ಲಸಿಕಾ ಕರಣ ನಡೆಸುವ ಸಲುವಾಗಿ ಹಾಗೂ ಸಾರ್ವಜನಿಕರಿಗೆ ಮಾಹಿತಿಗಳನ್ನು ಒದಗಿಸುವ ಸಲುವಾಗಿ ಜಿಲ್ಲಾಧಿಕಾರಿ ಜಿ. ಜಗದೀಶ್ ಲಸಿಕಾ ಕೇಂದ್ರಗಳಿಗೆ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

  • ಉಡುಪಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಲಸಿಕಾ ಕೇಂದ್ರಕ್ಕೆ ಜಿಲ್ಲಾ ಭೂ ನ್ಯಾಯ ಮಂಡಳಿಯ ವಿಶೇಷ ಆಯುಕ್ತ
    ರವಿಕುಮಾರ್ ಮೊ.ನಂ: 9480124382
  • ಮಣಿಪಾಲದ ಮಾಧವ ಕೃಪಾ ಶಾಲೆಯ ಲಸಿಕಾ ಕೇಂದ್ರಕ್ಕೆ ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕ ಸೀತಾರಾಮ ಶೆಟ್ಟಿ ಮೊ.ನಂ: 9448623952
  • ಬ್ರಹ್ಮಗಿರಿಯ ಸೈಂಟ್ ಸಿಸಿಲೀಸ್ ಶಾಲೆಯ ಲಸಿಕಾ ಕೇಂದ್ರಕ್ಕೆ ಓರಿಯೆಂಟಲ್ ಇನ್ಸುರೆನ್ಸ್ ಕಂಪೆನಿ ಲಿ.ನ ಮ್ಯಾನೇಜರ್ ಗೋಪಿಕೃಷ್ಣ ಮೊ.ನಂ: 9481902285
  • ಡಾ.ಬಿ.ಆರ್. ಶೆಟ್ಟಿ- ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಲಸಿಕಾ ಕೇಂದ್ರಕ್ಕೆ ದೇವರಾಜು ಅರಸು ಹಿಂದುಳಿದ ವರ್ಗಗಳ ಕಲ್ಯಾಣ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಂಜು ಮೊ.ನಂ: 8277734618

ಇವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

error: Content is protected !!