ಉಡುಪಿ: ಜೂನ್ 3 ರಂದು ನಡೆಯುವ ಲಸಿಕಾಕರಣದ ಮಾಹಿತಿ

 ಉಡುಪಿ: ಜೂನ್ 3 ರಂದು ನಡೆಯುವ ಲಸಿಕಾಕರಣದ ಮಾಹಿತಿ
Share this post

ಉಡುಪಿ ಜೂನ್ 2, 2021: ಜೂನ್ 3 ರಂದು ಉಡುಪಿ ಜಿಲ್ಲೆಯಲ್ಲಿ ಲಸಿಕೆ ನೀಡಲಾಗುವುದು.

45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಹಾಗೂ ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ (ಸೇಂಟ್ ಸಿಸಿಲಿ ಶಾಲೆ-250 ಡೋಸ್) ಮತ್ತು ಕುಕ್ಕಿಕಟ್ಟೆಯ ಎಫ್.ಪಿ.ಎ.ಐ ಇಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ -150 ಡೋಸ್) ನೀಡಲಾಗುವುದು.    

45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಹಾಗೂ ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ (ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರಿಗೆ) ಯನ್ನು ಉಡುಪಿಯ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ (100 ಡೋಸ್)  ನೀಡಲಾಗುವುದು. 

ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ ದುರ್ಬಲ ಗುಂಪಿನ ಫಲಾನುಭವಿಗಳಿಗೆ ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ನಗರದ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ (150 ಡೋಸ್) ನೀಡಲಾಗುತ್ತದೆ.

ಕೋವ್ಯಾಕ್ಸಿನ್ 2 ನೇ ಡೋಸ್ ಲಸಿಕೆ (ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 6 ವಾರ ಮೀರಿದವರಿಗೆ) ಉಡುಪಿಯ ಹಳೆ ಕಟ್ಟಡ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (250 ಡೋಸ್) ಮತ್ತು ಮಣಿಪಾಲದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಮಾಧವ ಕೃಪಾ ಶಾಲೆ, ಮಣಿಪಾಲ-200 ಡೋಸ್) ಲಸಿಕೆ ನೀಡಲಾಗುವುದು.

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರು / ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಮತ್ತು ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 6 ವಾರ ಮೀರಿದವರು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಜೂನ್ 3 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಜೂನ್ 3 ರಂದು ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಭ್ಯವಿರುವುದಿಲ್ಲ.

Subscribe to our newsletter!

Other related posts

error: Content is protected !!