ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಹೆಚ್ಚುವರಿ ಲಸಿಕೆ

 ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಹೆಚ್ಚುವರಿ ಲಸಿಕೆ
Share this post

ಮಂಗಳೂರು, ಜೂನ್ 06, 2021: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಕೋವಿಡ್ – 19 ಲಸಿಕೆ ಕೊರತೆ ಹಿನ್ನಲೆಯಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ ವಿ ಸದಾನಂದ ಗೌಡರನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಬೆಂಗಳೂರಿನಲ್ಲಿ ಇಂದು ಭೇಟಿಯಾಗಿ ಎರಡೂ ಜಿಲ್ಲೆಗಳಿಗೆ ಲಸಿಕೆ ಸರಬರಾಜು ಹೆಚ್ಚಳಕ್ಕೆ ಮನವಿ ಸಲ್ಲಿಸಿದರು.

ಸಚಿವರ ಮನವಿಯ ಹಿನ್ನಲೆಯಲ್ಲಿ ರಾಜ್ಯದಲ್ಲಿ ಲಸಿಕೆ ಜವಾಬ್ದಾರಿ ಹೊಂದಿರುವ ಉಪಮುಖ್ಯಮಂತ್ರಿ ಶ್ರೀ ಅಶ್ವತ್ ನಾರಾಯಣ್ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ 25 ಸಾವಿರದಂತೆ ಲಸಿಕೆ ಬಿಡುಗಡೆ ಮಾಡಲು ಕೇಂದ್ರ ಸಚಿವರಾದ ಶ್ರೀ ಡಿ ವಿ ಸದಾನಂದ ಗೌಡರು ಸೂಚಿಸಿದ್ದಾರೆ ಎಂದು ಶ್ರೀನಿವಾಸ್ ಪೂಜಾರಿ ತಿಳಿಸಿದರು.

Subscribe to our newsletter!

Other related posts

error: Content is protected !!