ಮಂಗಳೂರು: ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ ಲಭ್ಯ

 ಮಂಗಳೂರು: ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ ಲಭ್ಯ
Share this post

ಮಂಗಳೂರು, ಜೂನ್ 08, 2021: ಜೂನ್ 9 ರಂದು ಕೋವಿಶೀಲ್ಡ್ ಲಸಿಕೆಯು ಎಲ್ಲಾ ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಲಭ್ಯವಿರುತ್ತದೆ.

ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿಆನ್ ಲೈನ್ ರಿಜಿಸ್ಟ್ರೇಷನ್ ಮಾಡಿ, ಅಪಾಯಿಂಟ್ಮೆಂಟ್ ಷೆಡ್ಯೂಲ್ ಮಾಡಿಕೊಂಡವರಿಗೆ ಮಾತ್ರ ಲಸಿಕೆಯನ್ನು ನೀಡಲಾಗುವುದು.

ಮಂಗಳೂರಿನ 10 ನಗರ ಆರೋಗ್ಯ ಕೇಂದ್ರ, ಉಳ್ಳಾಲ ನಗರ ಸಮುದಾಯ ಆರೋಗ್ಯ ಕೇಂದ್ರ, ಬಂಟ್ವಾಳ ಮತ್ತು ಪುತ್ತೂರು ನಗರ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆಯನ್ನು ಪಡೆಯಲು online ಮೂಲಕ Register ಮಾಡಿಕೊಂಡವರು ಅಪಾಯಿಂಟ್ಮೆಂಟ್ ಷೆಡ್ಯೂಲ್ ಮಾಡಿಕೊಂಡು ಲಸಿಕಾ ಶಿಬಿರಕ್ಕೆ ಹಾಜರಾಗಬೇಕು.

ಈಗಾಗಲೇ ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಪಡೆದ ಫಲಾನುಭವಿಗಳು 2ನೇ ಡೋಸ್ ಲಸಿಕೆಯನ್ನು ಪಡೆಯಲು 84 ದಿನಗಳನ್ನು ಪೂರೈಸಿದವರು ತಮ್ಮ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರ/ ಸಮುದಾಯ ಆರೋಗ್ಯ ಕೇಂದ್ರ/ ನಗರ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆಯ ಲಭ್ಯತೆ ಇರುವಾಗ ಆದ್ಯತೆಯ ಮೇರೆಗೆ ಪಡೆಯಬೇಕು.

ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಹಾಗೂ ಎಲ್ಲಾ ತಾಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕೋವ್ಯಾಕ್ಸಿನ್ 2ನೇ ಡೋಸ್ ಲಭ್ಯವಿದ್ದು ಎರಡನೇ ಡೋಸ್ ಲಸಿಕೆಯನ್ನು ಪಡೆಯಲು ಬಾಕಿ ಇರುವ ಎಲ್ಲಾ ಫಲಾನುಭವಿಗಳು ಜಿಲ್ಲಾಸ್ಪತ್ರೆ/ ತಾಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಲಸಿಕೆಯನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!