ಮಂಗಳೂರು: ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

 ಮಂಗಳೂರು: ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ
Share this post

ಮಂಗಳೂರು, ಜೂನ್ 08, 2021: ಕೃಷಿ ಇಲಾಖೆಯ ವತಿಯಿಂದ ಪ್ರಸ್ತುತ ಸಾಲಿನ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಆಸಕ್ತ ರೈತರು ಅರ್ಜಿಗಳನ್ನು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಮಂಗಳೂರು ಇವರಿಗೆ ಸಲ್ಲಿಸಬಹದುದು.

ರಾಜ್ಯ ಕೃಷಿ ಕ್ಷೇತ್ರದಲ್ಲಿ ವಿನೂತನ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿ ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವವರಾಗಿರಬೇಕು. ಸಂಶೋಧನೆ/ಸಾಧನೆಗಳು ವ್ಯಾಪಕವಾಗಿ ಅಳವಡಿಸಲ್ಪಟ್ಟು ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು ಹಾಗೂ ಅರ್ಜಿಯೊಂದಿಗೆ ಸಂಬಂಧಪಟ್ಟ ಚಟುಚಟಿಕೆಗಳ ಜೆರಾಕ್ಸ್, ಫೋಟೋಗ್ರಾಫ್, ಸಿ.ಡಿ ಗಳನ್ನು ಲಗತ್ತಿಸಿರಬೇಕು.

ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ರೈತ ಸಂಪರ್ಕ ಕೇಂದ್ರಗಳು ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ದೂ. ಸಂಖ್ಯೆ: 0824-2423601 ಅನ್ನು ಸಂಪರ್ಕಿಸಬಹುದು ಎಂದು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!