ಮಂಗಳೂರು: ಭತ್ತದ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನ

 ಮಂಗಳೂರು: ಭತ್ತದ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನ
Share this post

ಮಂಗಳೂರು, ಜೂನ್ 08, 2021: ಕೃಷಿ ಇಲಾಖೆ ವತಿಯಿಂದ ಪ್ರಸ್ತುತ ಸಾಲಿನಲ್ಲಿ ಜಿಲ್ಲೆಯಲ್ಲಿ ಭತ್ತ ಬೆಳೆಗಾರರಲ್ಲಿ ಉತ್ಪಾದನಾ ಮತ್ತು ಉತ್ಪಾದಕತೆ ಹೆಚ್ಚಿಸಿ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಪ್ರತಿ ವರ್ಷ ಭತ್ತದಲ್ಲಿ ಹೆಚ್ಚು ಇಳುವರಿ ಪಡೆದ ರೈತರಿಗೆ ತಾಲೂಕು/ಜಿಲ್ಲಾ/ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ನೀಡಲಾಗುವುದು.

ರೈತರು ಕನಿಷ್ಠ ಒಂದು ಎಕರೆ ಜಮೀನಿನಲ್ಲಿ ಭತ್ತ ಬೆಳೆದಿರಬೇಕು ಹಾಗೂ ಸ್ವಂತ ಅಥವಾ ಸಾಮಾನ್ಯ ವ್ಯವಹಾರಿಕಾ ಅಧಿಕಾರ ಹೊಂದಿದ ಮಾಲಿಕರು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ರೈತ ಸಂಪರ್ಕ ಕೇಂದ್ರಗಳು ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ದೂ. ಸಂಖ್ಯೆ: 0824-2423601 ಅನ್ನು ಸಂಪರ್ಕಿಸಬಹುದು ಎಂದು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!