ಆಸಕ್ತ ವಿದ್ಯಾ ಸಂಸ್ಥೆಗಳಿಂದ ಹೊಸ ಸಂಯೋಜನೆ – ಅರ್ಜಿ ಆಹ್ವಾನ

 ಆಸಕ್ತ ವಿದ್ಯಾ ಸಂಸ್ಥೆಗಳಿಂದ ಹೊಸ ಸಂಯೋಜನೆ  – ಅರ್ಜಿ ಆಹ್ವಾನ
Share this post

ಮಂಗಳೂರು, ಜೂನ್ 17, 2021: ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಅಧಿನಿಯಮ 2000 ದ ಪ್ರಕರಣ 59(3) ರಂತೆ ಮಂಗಳೂರು ವಿಶ್ವ ವಿದ್ಯಾನಿಲಯದ ಸಂಯೋಜನೆಗೊಳಪಟ್ಟಿರುವ ಎಲ್ಲಾ ಕಾಲೇಜು  ಅಥವಾ ವಿದ್ಯಾಸಂಸ್ಥೆಗಳಿಂದ ಶೈಕ್ಷಣಿಕ ವರ್ಷ 2021-22ನೇ ಸಾಲಿಗೆ ಶಾಶ್ವತ /ಮುಂದುವರಿಕೆ/ವಿಸ್ತರಣಾ ಮತ್ತು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿರುವ ಆಸಕ್ತ ವಿದ್ಯಾ ಸಂಸ್ಥೆಗಳಿಂದ ಹೊಸ ಸಂಯೋಜನೆ ನೀಡುವ ಬಗ್ಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 8 ಕೊನೆಯ ದಿನ. ಅರ್ಜಿಗಳನ್ನು www.onlineaffiliation.karnataka.gov.in ಪೋರ್ಟಲ್ ಮೂಲಕ ಸಲ್ಲಿಸಬಹುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ  ವಿಶ್ವವಿದ್ಯಾನಿಲಯದ ವೆಬ್ ಸೈಟ್ : www.mangaloreuniversity.ac.in ನ್ನು ಸಂಪರ್ಕಿಸಬಹುದು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!