ರಾಜ್ಯ ಉತ್ಕ್ರಷ್ಟತಾ ಕೇಂದ್ರ: ಅರ್ಜಿ ಆಹ್ವಾನ

 ರಾಜ್ಯ ಉತ್ಕ್ರಷ್ಟತಾ ಕೇಂದ್ರ: ಅರ್ಜಿ ಆಹ್ವಾನ
Share this post

ಮಂಗಳೂರು, ಜೂನ್ 17, 2021: ಭಾರತ ಸರ್ಕಾರದ ಖೇಲೋ ಇಂಡಿಯಾ ಯೋಜನೆಯಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿರುವ ಶ್ರೀ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವಕೇಂದ್ರ, ವಿದ್ಯಾನಗರ, ಬೆಂಗಳೂರು ಅನ್ನು ರಾಜ್ಯ ಉತ್ಕ್ರಷ್ಟತಾ ಕೇಂದ್ರ (ಈಜು, ಅಥ್ಲೆಟಿಕ್ಸ್ ಮತ್ತು ಶೂಟಿಂಗ್) ಎಂದು ಘೋಷಿಸಿ ಮಂಜೂರು ಮಾಡಲಾಗಿದೆ.

ಈ ಕೇಂದ್ರಕ್ಕೆ ಖೇಲೋ ಇಂಡಿಯಾ ನಿಯಮಗಳನುಸಾರ ಗುತ್ತಿಗೆ ಆಧಾರದಲ್ಲಿ High Performance Manager, Head Coach (Swimming, Athletics and Shooting), Young Professional  ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿರುತ್ತದೆ.

ಸದರಿ ನೇಮಕಾತಿಗಾಗಿ ಅರ್ಜಿಗಳನ್ನು ಉಪನಿರ್ದೇಶಕರ ಕಛೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣಕನ್ನಡ ಜಿಲ್ಲೆ ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಜುಲೈ 5 ರಂದು ಸಂಜೆ 4 ಗಂಟೆಯೊಳಗೆ ಸಲ್ಲಿಸಬೇಕು.

ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ-0824-2451264 ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!