ದಕ್ಷಿಣ ಕನ್ನಡ: ಅಶಕ್ತರ ನಿವಾಸಕ್ಕೆ ತೆರಳಿ ಲಸಿಕೆ‌ ನೀಡಲು ಜಿಲ್ಲಾಡಳಿತ ನಿರ್ಧಾರ

 ದಕ್ಷಿಣ ಕನ್ನಡ: ಅಶಕ್ತರ ನಿವಾಸಕ್ಕೆ ತೆರಳಿ ಲಸಿಕೆ‌ ನೀಡಲು ಜಿಲ್ಲಾಡಳಿತ ನಿರ್ಧಾರ
Share this post

ಮಂಗಳೂರು, ಜೂನ್ 18, 2021: ಮನೆಯಿಂದ ಹೊರ ಬಂದು ಲಸಿಕೆ‌ ಹಾಕಿಸಿಕೊಳ್ಳಲು ಸಾಧ್ಯವಾಗದಿರುವವರ ನೆರವಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಧಾವಿಸಿದೆ.

ಜಿಲ್ಲೆಯಲ್ಲಿ ಅನಾರೋಗ್ಯಕ್ಕೀಡಾದವರಿಗೆ ಮತ್ತು ಅಶಕ್ತ ಹಿರಿಯ ನಾಗರಿಕರು ಸೇರಿದಂತೆ ಮನೆಯಿಂದ ಹೊರ ಬಂದು ಲಸಿಕೆ‌ ಹಾಕಿಸಿಕೊಳ್ಳಲು ಸಾಧ್ಯವಾಗದಿರುವವರ ಮನೆ ಮನೆಗೆ ಬಂದು ಲಸಿಕೆ‌ ನೀಡಲು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ.ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ,ರೋಟರಿ ಮಂಗಳೂರು ಹಾಗೂ ಬ್ಯಾಂಕ್ ಆಫ್ ಬರೋಡಾ ಇವರ ಸಹಯೋಗದೊಂದಿಗೆ ಆರೋಗ್ಯ ಕಾರ್ಯಕರ್ತರು ಮನೆಮನೆಗೆ ಬಂದು ಲಸಿಕೆ‌ ಹಾಕಲಿರುವರು. ಮನೆ ಮನೆ ಲಸಿಕಾ‌ ವಾಹನಕ್ಕೆ ಜೂನ್ 19 ರಂದು ಬೆಳಿಗ್ಗೆ 9.30 ಕ್ಕೆ ಮಂಗಳೂರಿನ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾಲಯ ಕಾಲೇಜಿನ ಆವರಣದಲ್ಲಿ ಚಾಲನೆ ನೀಡಲಾಗುವುದು.

ಲಸಿಕೆ‌ ಹಾಕಿಸಿಕೊಳ್ಳುವವರು ಜಿಲ್ಲಾಡಳಿತದ ಅಧಿಕೃತ ವೆಬ್ ಸೈಟ್ dk.nic.in ನಲ್ಲಿ ನೋಂದಾಯಿಸಿಕೊಳ್ಳಬೇಕು. ನೊಂದಾವಣೆಯಾದ ಬಳಿಕ ದಿನ ನಿಗದಿಪಡಿಸಿ ಮನೆ ಮನೆಗೆ ಬಂದು ಲಸಿಕೆ‌ ನೀಡಲಾಗುವುದು.

Subscribe to our newsletter!

Other related posts

error: Content is protected !!