ಬಹು ಆಯ್ಕೆ ಮಾದರಿಯಲ್ಲಿ 40 ಅಂಕಗಳಿಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ

 ಬಹು ಆಯ್ಕೆ ಮಾದರಿಯಲ್ಲಿ 40 ಅಂಕಗಳಿಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ
Share this post


ಕಾರವಾರ ಜುಲೈ 5, 2021: 2020-21ರ ಎಸ್‍ಎಸ್‍ಎಲ್‍ಸಿ ಮುಖ್ಯ ಪರೀಕ್ಷೆಯ ಎನ್‍ಎಸ್‍ಕ್ಯೂಎಫ್ ವಿಷಯಗಳ ತಾತ್ವಿಕ ಪರೀಕ್ಷೆಯನ್ನು ಬಹು ಆಯ್ಕೆ ಪ್ರಶೆನೆಗಳ ಮಾದರಿಯಲ್ಲಿ 40 ಅಂಕಗಳಿಗೆ ನಡೆಸಲಾಗುತ್ತದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರಿಕ್ಷಾ ಮಂಡಳಿಯ ಪರೀಕ್ಷಾ ವಿಭಾಗದ ನಿರ್ದೇಶಕಿ ವಿ. ಸುಮಂಗಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೋವಿಡ್-19 ಸಾಂಕ್ರಾಮಿಕ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರ ಹಿತ ದೃಷ್ಟಿಯಿಂದ 2020-21ನೇ ಸಾಲಿಗೆ ಎನ್‍ಎಸ್‍ಕ್ಯೂಎಫ್ ಯೋಜನೆಯಡಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಸ್ತುತ ಸ್ಥಿತಿಗತಿಯನ್ನು ಗಮನದಲ್ಲಿರಿಸಿ ಈ ವರ್ಷ ನಡೆಸುವ ಪ್ರಾಯೋಗಿಕ ಪರೀಕ್ಷೆಗಳಿಂದ ವಿನಾಯಿತಿ ನಿಡಲಾಗಿದೆ. ತಾತ್ವಿಕ ಪರೀಕ್ಷೆಯನ್ನು ಬಹು ಆಯ್ಕೆ ಮಾದರಿಯಲ್ಲಿ 40 ಅಂಕಗಳಿಗೆ ಪ್ರಶ್ನೆ ಪತ್ರಿಕೆ ತಯಾರಿಸಿ ಅದರಂತೆ ಪರೀಕ್ಷೆ ನಡೆಸಲಾಗುತ್ತದೆ.

ಈ ಅಂಕಗಳನ್ನು 80ಕ್ಕೆ ಪರಿವರ್ತಿಸಿ ಇದರೊಂದಿಗೆ ಆಂತರಿಕ ಮೌಲ್ಯಮಾಪನದ 20 ಅಂಕಗಳನ್ನು ಸೇರಿಸಿ ಪ್ರಕಟಿಸಲು ಅನುಮತಿ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

Subscribe to our newsletter!

Other related posts

error: Content is protected !!