ಆಗುಂಬೆ ಘಾಟಿ: ಭಾರಿ ವಾಹನ ಸಂಚಾರ ನಿಷೇಧ ತೆರವು

 ಆಗುಂಬೆ ಘಾಟಿ: ಭಾರಿ ವಾಹನ ಸಂಚಾರ ನಿಷೇಧ ತೆರವು
Share this post

ಉಡುಪಿ ಜುಲೈ 8, 2021: ರಾಷ್ಟ್ರೀಯ ಹೆದ್ದಾರಿ 169 ಎ ರ ತೀರ್ಥಹಳ್ಳಿ- ಉಡುಪಿ-ಮಂಗಳೂರು ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರದ ಮೇಲಿದ್ದ ನಿಷೇಧವನ್ನು ಜಿಲ್ಲಾಡಳಿತ ತೆರವುಗೊಳಿಸಿದೆ.

ಭಾರಿ ವಾಹನ ಸಂಚಾರವನ್ನು ನಿಷೇಧಿಸಿ, ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಅವಕಾಶ ಕಲ್ಪಿಸಿ ಹೊರಡಿಸಿರುವ ಆದೇಶವನ್ನು ಸದ್ಯ ಮಳೆ ಕಡಿಮೆ ಇರುವುದರಿಂದ ತಾತ್ಕಾಲಿಕವಾಗಿ ತಡೆಹಿಡಿದು ಭಾರಿ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶಿಸಿರುತ್ತಾರೆ.

Subscribe to our newsletter!

Other related posts

error: Content is protected !!