ಹಣ್ಣು, ತರಕಾರಿ ಆಧುನಿಕ ಮಾರುಕಟ್ಟೆ ನಿರ್ಮಾಣಕ್ಕೆ ಸಚಿವರಿಂದ ಶಿಲಾನ್ಯಾಸ

 ಹಣ್ಣು, ತರಕಾರಿ ಆಧುನಿಕ ಮಾರುಕಟ್ಟೆ ನಿರ್ಮಾಣಕ್ಕೆ ಸಚಿವರಿಂದ ಶಿಲಾನ್ಯಾಸ
Share this post
S T Somashekhar lays foundation stone for APMC

ಮಂಗಳೂರು, ಜುಲೈ14, 2021: ಕೃಷಿ ಮಾರುಕಟ್ಟೆ ಹಾಗೂ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಮಂಗಳೂರಿನ ಬೈಕಂಪಾಡಿಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಹಣ್ಣು ಮತ್ತು ತರಕಾರಿ ಮಾರಾಟಕ್ಕೆ ಆಧುನಿಕ ಮಾರುಕಟ್ಟೆ ನಿರ್ಮಾಣಕ್ಕೆ ಬುಧವಾರ ಶಿಲಾನ್ಯಾಸ ನೆರವೇರಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು, ಧಾರ್ಮಿಕ ದತ್ತಿ ಹಾಗೂ ಧರ್ಮಾದಾಯ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿದ್ದರು. ಸ್ಥಳೀಯ ಶಾಸಕ ಭರತ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಶಾಸಕರಾದ ವೇದವ್ಯಾಸ ಕಾಮತ್, ಉಮನಾಥ್ ಕೋಟ್ಯಾನ್, ಮೇಯರ್ ಪ್ರೇಮಾನಂದ ಶೆಟ್ಟಿ, ಮಂಗಳೂರು ಎ.ಪಿ.ಎಂ.ಸಿ ಅಧ್ಯಕ್ಷ ಕೆ. ಕೃಷ್ಣರಾಜ ಹೆಗ್ಡೆ, ಉಪಾಧ್ಯಕ್ಷೆ ರಜನಿ ದಗ್ಗಣ್ಣ, ಕಾರ್ಯದರ್ಶಿ ಸಿ.ಎಚ್. ಮೋಹನ್, ಎ.ಪಿ.ಎಂ.ಸಿ ಆಡಳಿತ ಮಂಡಳಿ ಸಮಿತಿ ಸದಸ್ಯರು ಸೇರಿದಂತೆ ಗಣ್ಯರು ಭಾಗವಹಿಸಿದ್ದರು.

Subscribe to our newsletter!

Other related posts

error: Content is protected !!