ಕೈಗಾರಿಕೆ, ಸೇವಾ ಘಟಕ ಸ್ಥಾಪನೆಗೆ ಆಸಕ್ತರಿಂದ ಅರ್ಜಿ ಆಹ್ವಾನ

 ಕೈಗಾರಿಕೆ, ಸೇವಾ ಘಟಕ ಸ್ಥಾಪನೆಗೆ ಆಸಕ್ತರಿಂದ ಅರ್ಜಿ ಆಹ್ವಾನ
Share this post

ಕಾರವಾರ ಜುಲೈ 15, 2021: ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯು 2021-22ನೇ ಸಾಲಿನ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ(ಪಿಎಂಇಜಿಪಿ) ಯೋಜನೆಯಡಿ ಕೈಗಾರಿಕಾ/ಸೇವಾ ಘಟಕ ಸ್ಥಾಪಿಸಲು ಆಸಕ್ತಿಯುಳ್ಳ ನಿರುದ್ಯೋಗಿ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತರು ವೆಬ್‍ಸೈಟ್: www.kviconline.gov.in/pmegpeportal ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿಯ ಹಾರ್ಡ್ ಪ್ರತಿಯನ್ನು ಜಿಲ್ಲಾ ಗ್ರಾಮೋದ್ಯೋಗ ಅಧಿಕಾರಿಗಳು, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಜಿಲ್ಲಾ ಕಚೇರಿ. ಡಾ. ಪಿಕಳೆ ರಸ್ತೆ, ಕಾರವಾರ ಈ ವಿಳಾಸಕ್ಕೆ ಕಳುಹಿಸಿ ಕೊಡಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08382-226506, 9480825632ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಜಿಲ್ಲಾ ಗ್ರಾಮೋದ್ಯೋಗ ಅಧಿಕಾರಿ ನಾಗಜ್ಯೋತಿ ವಿ. ನಾಯ್ಕ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!