ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಜಿ ಆಹ್ವಾನ

 ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಜಿ ಆಹ್ವಾನ
Share this post

ಮಂಗಳೂರು, ಜುಲೈ 16, 2021: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಉಪಯೋಜನೆಯಡಿ 2020-21ನೇ ಸಾಲಿನಲ್ಲಿ ಸಹಾಯಧನ ಹಾಗೂ ಕ್ರೀಡಾಗಂಟು ನೀಡಲು ಅರ್ಹ ಸಂಘ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದೆ.

ಜಿಲ್ಲೆಯ ಪ್ರತಿ ತಾಲೂಕಿನ ಪರಿಶಿಷ್ಟ ಜಾತಿಯ 2 ಮತ್ತು ಪರಿಶಿಷ್ಟ ಪಂಗಡದ 1 ಯುವಜನ ಸಂಘಗಳು ಈ ಯೋಜನೆಯಡಿ ನೋಂದಾಯಿಸಿಕೊಳ್ಳಲು ಅವಕಾಶವಿದೆ. ಸಹಾಯಧನವನ್ನು ಸಂಘದ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು ಹಾಗೂ ಕ್ರೀಡಾಗಂಟನ್ನು ವಿತರಿಸಲಾಗುವುದು.

ಅರ್ಜಿ ಸಲ್ಲಿಸಲು ಆಗಸ್ಟ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ದೂರವಾಣಿ ಸಂ: 0824-2451264 ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!