ಹಂತ ಹಂತವಾಗಿ ತುಳು, ಬ್ಯಾರಿ, ಕೊಂಕಣಿ ಭವನಗಳ ನಿರ್ಮಾಣ: ಸಚಿವ ಕೋಟ ಶ್ರೀನಿವಾಸ ಪೂಜಾರಿ

 ಹಂತ ಹಂತವಾಗಿ ತುಳು, ಬ್ಯಾರಿ, ಕೊಂಕಣಿ ಭವನಗಳ ನಿರ್ಮಾಣ: ಸಚಿವ ಕೋಟ ಶ್ರೀನಿವಾಸ ಪೂಜಾರಿ
Share this post

ಮಂಗಳೂರು, ಜುಲೈ 20, 2021: ತುಳು, ಬ್ಯಾರಿ, ಕೊಂಕಣಿ ಸಾಂಸ್ಕೃತಿಕ ಭವನಗಳನ್ನು ಹಂತಹಂತವಾಗಿ ನಿರ್ಮಾಣ ಮಾಡಲು ಈಗಾಗಲೇ ಕ್ರಮಕೈಗೊಳ್ಳಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಹಿಂದು ಧಾರ್ಮಿಕ ದತ್ತಿ ಹಾಗೂ ಧರ್ಮಾದಾಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದರು.

ಅವರು ಜು.19ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ತುಳು ಬ್ಯಾರಿ, ಕೊಂಕಣಿ ಅಕಾಡೆಮಿ ಅಧ್ಯಕ್ಷರೊಂದಿಗೆ ಭವನಗಳ ನಿರ್ಮಾಣ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲಾ ರಂಗಮಂದಿರ ಜೊತೆಗೆ ತುಳು, ಬ್ಯಾರಿ ಹಾಗೂ ಕೊಂಕಣಿ ಸಾಂಸ್ಕೃತಿಕ ಭವನದ ನಿರ್ಮಾಣಕ್ಕೆ ಸರ್ಕಾರದಿಂದ ಈಗಾಗಲೇ ಅನುದಾನ ಬಿಡುಗಡೆಯಾಗಿದೆ. ಆಯಾ ಅಕಾಡೆಮಿ ಭವನಗಳ ನಿರ್ಮಾಣಕ್ಕೆ ಸಂಬಂಧಿಸಿದವರು ಒಪ್ಪಿಗೆ ನೀಡಿದ್ದಾರೆ ಎಂದರು.

ಜಿಲ್ಲಾ ರಂಗಮಂದಿರಕ್ಕೆ ಮೊದಲ ಹಂತದಲ್ಲಿ 5 ಕೋಟಿ, ತುಳು ಭವನದ ನಿರ್ಮಾಣಕ್ಕೆ ಎರಡನೇ ಹಂತದಲ್ಲಿ 3.5 ಕೋಟಿ, ಕೊಂಕಣಿ ಮತ್ತು ತುಳು ಅಕಾಡೆಮಿಯ ಭವನಕ್ಕಾಗಿ ಮೊದಲ ಹಂತದಲ್ಲಿ ತಲಾ 3 ಕೋಟಿ ರೂ.ಗಳನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಹಾಗೂ ಶಾಸಕ ಡಾ. ಭರತ್ ಶೆಟ್ಟಿ ವೇದಿಕೆಯಲ್ಲಿದ್ದರು.

ಉಪವಿಭಾಗಾಧಿಕಾರಿ ಮದನ್ ಮೋಹನ್, ತುಳು ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಕತ್ತಲ್‌ಸಾರ್, ಬ್ಯಾರಿ ಅಕಾಡೆಮಿ ಅಧ್ಯಕ್ಷರಾದ ರಹೀಂ ಉಚ್ಚಿಲ, ಕೊಂಕಣಿ ಅಕಾಡೆಮಿ ಅಧ್ಯಕ್ಷರಾದ ಡಾ. ಜಗದೀಶ್ ರೈ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್, ತಹಶೀಲ್ದಾರರು ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Subscribe to our newsletter!

Other related posts

error: Content is protected !!