ಅತಿವೃಷ್ಟಿಯಿಂದ ಬೆಳೆ ಹಾನಿ: ಕರ್ನಾಟಕಕ್ಕೆ ₹ 629.03 ಕೋಟಿ ನೆರವು

 ಅತಿವೃಷ್ಟಿಯಿಂದ ಬೆಳೆ ಹಾನಿ: ಕರ್ನಾಟಕಕ್ಕೆ  ₹ 629.03 ಕೋಟಿ ನೆರವು
Share this post

2020ರಲ್ಲಿ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿ

ಉಡುಪಿ, ಜು 27, 2021: ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ 2020ರಲ್ಲಿ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿಗೆ ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಜಿ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ರೂ.629.03 ಕೋಟಿ ಹಾಗೂ ಮಹಾರಾಷ್ಟ್ರಕ್ಕೆ ರೂ.701.00 ಕೋಟಿಗಳ ನೆರವಿನ ಅನುಮೋದನೆಯನ್ನು SDRF ಮಾನದಂಡಗಳ ಅಡಿಯಲ್ಲಿ ರಾಜ್ಯ ಸರ್ಕಾರಕ್ಕೆ ನೀಡಿದೆ.

ಅನಾವೃಷ್ಟಿ ಕಾರಣದಿಂದ 2020ನೇ ವರ್ಷದಲ್ಲಿ ರಾಜಸ್ಥಾನದಲ್ಲಿನ ಕೃಷಿ ಸಮುದಾಯಕ್ಕೆ ಅಪಾರ ಬೆಳೆ ನಷ್ಟ ಉಂಟಾಗಿದ್ದು, ಕೇಂದ್ರ ಸರಕಾರ ಈ ಬೆಳೆ ನಷ್ಟಕ್ಕೆ ನೆರವಿನ ರೂಪದಲ್ಲಿ ರೂ.113.69 ಕೋಟಿಗಳನ್ನು SDRF ಮಾನದಂಡಗಳ ಅಡಿಯಲ್ಲಿ ಅನುಮೋದಿಸಿದೆ.

2020-21 ನೇ ವರ್ಷದಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಒಟ್ಟು 67.96 ಲಕ್ಷ ಹೆಕ್ಟೇರ್ ಕೃಷಿಭೂಮಿಯನ್ನು ಮಹಾರಾಷ್ಟ್ರ ರಾಜ್ಯದಲ್ಲಿ ವಿಮೆಗೆ ಒಳಪಡಿಸಿಲಾಗಿತ್ತು.

ಈ ಸಾಲಿನ ಖಾರಿಫ್ ಮತ್ತು ರಬಿಯಲ್ಲಾದ ಬೆಳೆ ನಷ್ಟಕ್ಕೆ ಕೇಂದ್ರ ಸರ್ಕಾರ ಒಟ್ಟು ರೂ. 750.12 ಕೋಟಿ ಬಿಡುಗಡೆ ಮಾಡಿದ್ದು, 11.43 ಲಕ್ಷ ರೈತರು ಇದರ ಫಲಾನುಭವವನ್ನು ಪಡೆದಿದ್ದಾರೆ.

ಈ ಕುರಿತು ಚುಕ್ಕೆಗುರಿತನ ಪ್ರಶ್ನೆಗೆ ಲೋಕಸಭೆಯಲ್ಲಿ ಕೇಂದ್ರ ಕೃಷಿ ಮತ್ತು ಕಲ್ಯಾಣ ಸಚಿವರು ಉತ್ತರಿಸಿದ್ದು, ಮಾನ್ಯ ಶೋಭಾ ಕರಂದ್ಲಾಜೆ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರು ಮಾಹಿತಿಯನ್ನು ನೀಡಿರುತ್ತಾರೆ

Subscribe to our newsletter!

Other related posts

error: Content is protected !!