ಹಿರಿಯ ನಾಗರಿಕರಿಗೆ ರಾಜ್ಯ ಪ್ರಶಸ್ತಿ : ಪ್ರಸ್ತಾವನೆ ಆಹ್ವಾನ

 ಹಿರಿಯ ನಾಗರಿಕರಿಗೆ ರಾಜ್ಯ ಪ್ರಶಸ್ತಿ : ಪ್ರಸ್ತಾವನೆ ಆಹ್ವಾನ
Share this post

ಉಡುಪಿ, ಜುಲೈ 29, 2021: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಅಕ್ಟೋಬರ್ 1 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸಲಾಗುವುದು. ಈ ಸಂದರ್ಭದಲ್ಲಿ ಶಿಕ್ಷಣ, ಸಾಹಿತ್ಯ, ಕಲಾ ಕ್ಷೇತ್ರ, ಕಾನೂನು, ಪ್ರತಿಭೆ, ಕ್ರೀಡೆಗಳಲ್ಲಿ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ ಸಲ್ಲಿಸಿದ ಹಿರಿಯ
ನಾಗರಿಕರಿಗೆ 6 ವೈಯಕ್ತಿಕ ಪ್ರಶಸ್ತಿ ಮತ್ತು ಸಂಸ್ಥೆಗೆ 1 ಪ್ರಶಸ್ತಿ ಸೇರಿದಂತೆ ಒಟ್ಟು 7 ರಾಜ್ಯ ಪ್ರಶಸ್ತಿಗಳನ್ನು ನೀಡಲಾಗುವುದು.

ಜಿಲ್ಲೆಯ ಹಿರಿಯ ನಾಗರಿಕರಿಂದ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ.

ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ ನಡೆಯುವ ಹಿರಿಯ ನಾಗರಿಕರ ದಿನಾಚರಣೆ ಕರ‍್ಯಕ್ರಮದಲ್ಲಿ ವಿತರಿಸಲಾಗುವುದು.

ಪ್ರಸ್ತಾವನೆಗಳನ್ನು ದ್ವಿಪ್ರತಿಯಲ್ಲಿ ಸಲ್ಲಿಸಲು ಆಗಸ್ಟ್ 18 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಸಬಲೀಕರಣ ಅಧಿಕಾರಿ ಕಛೇರಿ, ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574810/811 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!