ಗಡಿಭಾಗಕ್ಕೆ ಹೊಂದಿಕೊಂಡಿರುವ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ

 ಗಡಿಭಾಗಕ್ಕೆ ಹೊಂದಿಕೊಂಡಿರುವ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ
Share this post

ಮಂಗಳೂರು, ಆ.03, 2021: ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಸಾರ್ವಜನಿಕರು ಮದ್ಯ ಸೇವನೆಗೆ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗಗಳ ಮದ್ಯದಂಗಡಿಗಳನ್ನೇ ಅವಲಂಬಿಸಿರುವುದರಿಂದ ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುವ ಸಾಧ್ಯತೆಗಳು ಇರುತ್ತದೆ.

ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಕೇರಳ ರಾಜ್ಯದ ಗಡಿಭಾಗಕ್ಕೆ ಹೊಂದಿಕೊಂಡಿರುವ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ, ತಾಲೂಕು ಪ್ರದೇಶಗಳ 5 ಕಿ.ಮೀ. ವ್ಯಾಪ್ತಿಯಲ್ಲಿರುವ ಎಲ್ಲಾ ಮದ್ಯದಂಗಡಿಗಳನ್ನು 2021ರ ಆಗಸ್ಟ್ 3 ರಿಂದ 15 ರವರೆಗೆ ಮುಚ್ಚುವಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ಆದೇಶ ಹೊರಡಿಸಿದ್ದಾರೆ.

ಈ ಆದೇಶವನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸುವಂತೆ ಜಿಲ್ಲಾ ಅಬಕಾರಿ ಉಪ ಆಯುಕ್ತರಿಗೆ ನಿರ್ದೇಶನ ನೀಡಲಾಗಿದ್ದು, ನಿಷೇಧಾಜ್ಞೆ ಜಾರಿಗೊಂಡಿರುವ ಸಮಯದಲ್ಲಿ ಆ ವ್ಯಾಪ್ತಿಗೊಳಪಟ್ಟ ವೈನ್‍ಶಾಪ್ ಅಥವಾ ಬಾರ್‍ಗಳ ಮುಂದಿನ ಮತ್ತು ಹಿಂದಿನ ಬಾಗಿಲುಗಳಿಗೆ ಅಬಕಾರಿ ಇಲಾಖೆಯ ಮೊಹರು (ಸೀಲು) ಗಳನ್ನು ಹಾಕಿ ಕಡ್ಡಾಯವಾಗಿ ಮುಚ್ಚುವಂತೆ ನೋಡಿಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!