ಶ್ರೀ ಕೃಷ್ಣ ಮಠಕ್ಕೆ ಸಚಿವ ಸುನಿಲ್ ಕುಮಾರ್ ಭೇಟಿ
ಉಡುಪಿ, ಆ 06, 2021: ಕರ್ನಾಟಕ ರಾಜ್ಯ ಸರಕಾರದ ಸಚಿವ ಸುನಿಲ್ ಕುಮಾರ್ ಕುಟುಂಬ ಸಮೇತರಾಗಿ ಉಡುಪಿ ಶ್ರೀಕೃಷ್ಣಮಠಕ್ಕೆ ಇಂದು ಭೇಟಿ ನೀಡಿದರು.
ಅವರು ದೇವರ ದರ್ಶನದ ಬಳಿಕ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.
ಈ ಸಂದರ್ಭದಲ್ಲಿ ಉಡುಪಿ ಶಾಸಕರಾದ ರಘುಪತಿ ಭಟ್, ಬಿ.ಜೆ.ಪಿ.ಜಿಲ್ಲಾಧ್ಯಕ್ಷರಾದ ಸುರೇಶ ನಾಯಕ್ ಕುಯಿಲಾಡಿ ,ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರ್ ರತ್ನಕರ ಹೆಗ್ಡೆ,ಮಠದ ವ್ಯವಸ್ಥಾಪಕರಾದ ಗೋವಿಂದರಾಜ್,ಶ್ರೀಕೃಷ್ಣ ಸೇವಾಬಳಗದ ರಾಮಚಂದ್ರ ರಾವ್, ಪ್ರದೀಪ್ ರಾವ್ ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.