ಶಾಲೆಯಿಂದ ಹೊರಗುಳಿದಿರುವ ಮಕ್ಕಳ ಮನೆ-ಮನೆ ಸಮೀಕ್ಷೆ
ಉಡುಪಿ, ಆಗಸ್ಟ್. 10, 2021: ಪ್ರಸಕ್ತ ಸಾಲಿನಲ್ಲಿ ಶಾಲೆಯಿಂದ ವಂಚಿತರಾಗಿರುವ ಮಕ್ಕಳನ್ನು ಗುರುತಿಸಿ ಮುಖ್ಯವಾಹಿನಿಗೆ ತರುವ
ನಿಟ್ಟಿನಲ್ಲಿ, ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಬರುವ ಮನೆ ಮನೆ ಸಮೀಕ್ಷೆಯನ್ನು ಪುನಃರಂಭಿಸಲಾಗಿದೆ.
ಈ ಸಮೀಕ್ಷೆಯು ಆಗಸ್ಟ್ 11 ರಿಂದ 17 ರವರೆಗೆ ಮುಂದುವರೆಯಲಿದ್ದು, ನಿಯೋಜಿಸಿದ ಸಿಬ್ಬಂದಿಗಳು ಮನೆಗೆ ಭೇಟಿ ನೀಡಿದ
ಸಂದರ್ಭದಲ್ಲಿ ತಮ್ಮ ಕುಟುಂಬದ ಎಲ್ಲಾ ಸದಸ್ಯರ ಪಡಿತರ ಚೀಟಿ, ಆಧಾರ್ ಕಾರ್ಡ್ ಹಾಗೂ ಮಕ್ಕಳ ಜನನ ಪ್ರಮಾಣ ಪತ್ರವನ್ನುನೀಡಿ ಸದರಿ ಸರ್ವೇ ಕಾರ್ಯದಲ್ಲಿ ತೊಡಗಿಕೊಳ್ಳುವಂತೆ ಉಡುಪಿ ನಗರ ಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.