ಕೃಷಿ ಇಲಾಖೆ ನಿಗದಿ ಪಡಿಸಿದ ದರದಲ್ಲಿ ರಸಗೊಬ್ಬರ ಖರೀದಿಸುವಂತ ರೈತರಿಗೆ ಸೂಚನೆ
ಮಂಗಳೂರು, ಆ.11, 2021: ಈ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರಕ್ಕೆ ಸಂಬಂಧಿಸಿದಂತೆ ಯಾವುದೇ ಕೊರತೆ ಇಲ್ಲ. ಖಾಸಗಿ ಹಾಗೂ ಸಹಕಾರಿ ರಸಗೊಬ್ಬರ ಮಾರಾಟಗಾರರಿಂದ ರೈತರು ರಸಗೊಬ್ಬರವನ್ನು ಖರೀದಿಸುವಾಗ ಚೀಲಗಳ ಮೇಲೆ ಮುದ್ರಿತ ದರವನ್ನು ಗಮನಿಸಿ ಖರೀದಿಸುವಂತೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಮಾರಾಟಗಾರರು ಚೀಲದ ಮೇಲೆ ಮುದ್ರಿತ ಧಾರಣೆಗಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದರೆ ಹತ್ತಿರದ ಕೃಷಿ ಇಲಾಖೆ ಕಛೇರಿಗೆ ದೂರು ನೀಡಬಹುದು.
ರಸಗೊಬ್ಬರ ಮಾರಾಟಗಾರರು ಲಭ್ಯವಿರುವ ದಾಸ್ತಾನಿನ ರಸಗೊಬ್ಬರಗಳನ್ನು ಚೀಲದ ಮೇಲಿನ ಮುದ್ರಿತ ದರಕ್ಕಿಂತ ಹೆಚ್ಚಿನ ದರದಲ್ಲಿ ರೈತರಿಗೆ ಮಾರಾಟ ಮಾಡುವಂತಿಲ್ಲ. ಹೆಚ್ಚಿನ ದರಕ್ಕೆ ಮಾರಾಟ ಮಾಡುವುದು ಕಂಡು ಬಂದರೆ ಪರವಾನಿಗೆ ರದ್ದುಗೊಳಿಸಲಾಗುವುದು ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸುವಂತೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.