ಆ. 30ರ ವರೆಗೆ ಗಡಿಯಲ್ಲಿನ ಮದ್ಯದಂಗಡಿಗಳು ಬಂದ್

 ಆ. 30ರ ವರೆಗೆ ಗಡಿಯಲ್ಲಿನ ಮದ್ಯದಂಗಡಿಗಳು ಬಂದ್
Share this post

ಮಂಗಳೂರು ಆ.17, 2021:  ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುವ ಸಾಧ್ಯತೆಯನ್ನು ಪರಿಗಣಿಸಿ ಕೇರಳ ರಾಜ್ಯದ ಗಡಿಭಾಗಕ್ಕೆ ಹೊಂದಿಕೊಂಡಿರುವ ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ತಾಲೂಕು ಪ್ರದೇಶಗಳ 5 ಕಿ.ಮೀ. ವ್ಯಾಪ್ತಿಯಲ್ಲಿರುವ 19 ಗ್ರಾಮಗಳ (26 ಐಎಂಎಲ್ ಹಾಗೂ 5 ಶೇಂದಿ) ಮದ್ಯದಂಗಡಿಗಳನ್ನು ಆಗಸ್ಟ್ 1ರಿಂದ 15ರವರೆಗೆ ಮುಚ್ಚಲು ಈಗಾಗಲೇ ಆದೇಶಿಸಲಾಗಿರುತ್ತದೆ.

ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಈಗಾಗಲೇ ಹೊರಡಿಸಿರುವ ಆದೇಶವನ್ನು ಆಗಸ್ಟ್ 16 ರಿಂದ 30ರ ವರೆಗೆ ಮುಂದುವರಿಸಲಾಗಿದ್ದು, ಆ.30ರ ವರೆಗೆ ಮದ್ಯದಂಗಡಿಗಳನ್ನು ಮುಚ್ಚುವಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶ ಹೊರಡಿಸಿದ್ದಾರೆ.

Subscribe to our newsletter!

Other related posts

error: Content is protected !!