ಆ. 30ರ ವರೆಗೆ ಗಡಿಯಲ್ಲಿನ ಮದ್ಯದಂಗಡಿಗಳು ಬಂದ್
ಮಂಗಳೂರು ಆ.17, 2021: ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುವ ಸಾಧ್ಯತೆಯನ್ನು ಪರಿಗಣಿಸಿ ಕೇರಳ ರಾಜ್ಯದ ಗಡಿಭಾಗಕ್ಕೆ ಹೊಂದಿಕೊಂಡಿರುವ ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ತಾಲೂಕು ಪ್ರದೇಶಗಳ 5 ಕಿ.ಮೀ. ವ್ಯಾಪ್ತಿಯಲ್ಲಿರುವ 19 ಗ್ರಾಮಗಳ (26 ಐಎಂಎಲ್ ಹಾಗೂ 5 ಶೇಂದಿ) ಮದ್ಯದಂಗಡಿಗಳನ್ನು ಆಗಸ್ಟ್ 1ರಿಂದ 15ರವರೆಗೆ ಮುಚ್ಚಲು ಈಗಾಗಲೇ ಆದೇಶಿಸಲಾಗಿರುತ್ತದೆ.
ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಈಗಾಗಲೇ ಹೊರಡಿಸಿರುವ ಆದೇಶವನ್ನು ಆಗಸ್ಟ್ 16 ರಿಂದ 30ರ ವರೆಗೆ ಮುಂದುವರಿಸಲಾಗಿದ್ದು, ಆ.30ರ ವರೆಗೆ ಮದ್ಯದಂಗಡಿಗಳನ್ನು ಮುಚ್ಚುವಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶ ಹೊರಡಿಸಿದ್ದಾರೆ.