ಪ್ರೌಢಶಾಲೆ ಆರಂಭ: ತಾತ್ಕಾಲಿಕ ಮುಂದೂಡಿಕೆ

 ಪ್ರೌಢಶಾಲೆ ಆರಂಭ: ತಾತ್ಕಾಲಿಕ ಮುಂದೂಡಿಕೆ
Share this post

ಮಂಗಳೂರು, ಆ.19, 2021: 2021-22ನೇ ಶೈಕ್ಷಣಿಕ ವರ್ಷದ 9 ಮತ್ತು 10ನೇ ತರಗತಿಗಳ ಭೌತಿಕ ತರಗತಿಗಳನ್ನು ಆಗಸ್ಟ್ 23 ರಿಂದ ಪ್ರತಿ ದಿನ ಬೆಳಿಗ್ಗೆ ನಡೆಸಲು ಸೂಚಿಸಲಾಗಿತ್ತು.

ಆದರೆ ಜಿಲ್ಲೆಯಲ್ಲಿ ಕೋವಿಡ್-19 ಪಾಸಿಟಿವಿಟಿ ದರ ಶೇ.2 ಕ್ಕಿಂತ ಹೆಚ್ಚಿರುವುದರಿಂದ ಜಿಲ್ಲಾಧಿಕಾರಿಗಳ ನಿರ್ದೇಶನದನುಸಾರ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಗೆ ಅನ್ವಯವಾಗುವಂತೆ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರೌಢ ಶಾಲೆಗಳನ್ನು ಭೌತಿಕವಾಗಿ ಪ್ರಾರಂಭಿಸುವುದನ್ನು ಆಗಸ್ಟ್ 28 ರವರೆಗೆ ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ಶಿಕ್ಷಕರು ಆನ್‍ಲೈನ್ ಮೂಲಕ ಶೈಕ್ಷಣಿಕ ಚಟುವಟಿಕೆ ನಡೆಯಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!